Published
9 months agoon
By
Akkare News
ಉದ್ಯೋಗ ಮಾರುಕಟ್ಟೆಯಲ್ಲಿ ಇಂಗ್ಲೀಷ್ ಭಾಷೆಗೆ ಹೆಚ್ಚು ಆದ್ಯತೆ ಇರುವುದರಿಂದ ವಿದ್ಯಾರ್ಥಿಗಳು ಇಂಗ್ಲಿಷ್ ಭಾಷೆ ಮಾತನಾಡುವುದನ್ನು ಅಭ್ಯಾಸ ಮಾಡಿಕೊಳ್ಳಬೇಕೆಂದು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇಂಗ್ಲಿಷ್ ವಿಭಾಗದ ಉಪನ್ಯಾಸಕಿಯಾದ ಶ್ರೀಮತಿ ತನುಜಾಕ್ಷಿ ಕೆ. ಶೆಟ್ಟಿ ಹೇಳಿದರು. ಇವರು ಇತ್ತೀಚಿಗೆ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸ ಕೋಶ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಆಯೋಜಿಸಿದ ಸರಣಿ ಉಪನ್ಯಾಸ ಕಾರ್ಯಕ್ರಮದ 12ನೇ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ “ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಇಂಗ್ಲಿಷ್ ಭಾಷೆಯ ಪಾತ್ರ” ಎಂಬ ವಿಷಯದ ಕುರಿತು ಮಾತನಾಡಿದರು.




ಇಂಗ್ಲೀಷ್ ಭಾಷೆ ಮೇಲಿನ ಹಿಡಿತ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿ ಉದ್ಯೋಗ ಸಂದರ್ಶನದಲ್ಲಿ ಯಶಸ್ವಿಯಾಗಿ ಭಾಗವಹಿಸಲು ಸಹಕರಿಯಾಗುತ್ತದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷ ಸ್ಥಾನವನ್ನು ವಹಿಸಿದ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಉಪನ್ಯಾಸಕರಾದ ಶ್ರೀ ಮಹೇಶ ಜಿ ಹಾಗೂ ಎನ್.ಎಸ್.ಎಸ್ ಯೋಜನಾಧಿಕಾರಿಯಾದ ಡಾ. ಹರಿಪ್ರಸಾದ್ ಎಸ್ ಇವರುಗಳು ಉಪಸ್ಥಿತರಿದ್ದರು. ಸ್ವಯಂ ಸೇವಕಿಯಾದ ಸಿಂಚನ ಪ್ರಾರ್ಥಿಸಿದರು,ಲಾವಣ್ಯ ಸ್ವಾಗತಿಸಿದರು, ಅಕ್ಷತಾ ಸಂಪನ್ಮೂಲ ವ್ಯಕ್ತಿಯ ಪರಿಚಯ ಮಾಡಿದರು, ಅಶ್ವಿನಿ ವಂದಿಸಿದರು ಹಾಗೂ ಪುಷ್ಪಾವತಿ ಕಾರ್ಯಕ್ರಮ ನಿರ್ವಹಿಸಿದರು.










