Published
11 months agoon
By
Akkare News
ಬೆಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಪದೇಪದೆ ಸಂಭವಿಸುತ್ತಿರುವ ಕೋಮು ಗಲಭೆಗಳನ್ನು ನಿಗ್ರಹಿಸುವ ಸಲುವಾಗಿ ಸರ್ಕಾರ ರಚಿಸಿರುವ ವಿಶೇಷ ಕೋಮು ನಿಗ್ರಹ ಪಡೆಯ ಉದ್ಘಾಟನೆ ನಾಳೆ ನೆರವೇರಲಿದೆ. ಗೃಹ ಸಚಿವ ಜಿ.ಪರಮೇಶ್ವರ್ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭಾಗವಹಿಸಲಿದ್ದಾರೆ.
ಕೋಮುಗಲಭೆ ಪ್ರಚೋದಿಸುವ ಸರಣಿ ಹತ್ಯೆಗಳ ತಡೆಗೆ ರಾಜ್ಯ ಸರ್ಕಾರ ಈ ವಿಶೇಷ ಪಡೆಯನ್ನು ರಚಿಸಿದೆ. ವಿಶೇಷ ಕಾರ್ಯಪಡೆ ಘಟಕಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಯನ್ನು ಮುಖ್ಯಸ್ಥರನ್ನಾಗಿ ನೇಮಿಸಿ ಗೃಹ ಇಲಾಖೆ ಆದೇಶ ಹೊರಡಿಸಿದೆ.