Connect with us

ಇತರ

ನಾನು ನಂಬಿದ ಗಣಪನ ದಯೇ… 10 ನಿಮಿಷ ಟ್ರಾಫಿಕ್ ನಲ್ಲಿ ಸಿಲುಕಿ ದುರಂತದಿಂದ ಕೂದಲೆಳೆ ಅಂತರದಲ್ಲಿ ಪಾರಾದ ಮಹಿಳೆ…!!

Published

on

ಅಹಮದಾಬಾದ್, :ಮಹಿಳೆಯೊಬ್ಬರು ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದರಿಂದ ಏರ್‌ ಇಂಡಿಯಾ ವಿಮಾನ ಅಪಘಾತದಿಂದ ಪಾರಾಗಿದ್ದಾರೆ.

ಅಹಮದಾಬಾದ್‌ನ ಭೂಮಿ ಚೌಹಾಣ್ ಲಂಡನ್‌ಗೆ ಹೊರಟಿದ್ದರು. ಆದರೆ, ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದರಿಂದ ಅಹಮದಾಬಾದ್ ವಿಮಾನ ನಿಲ್ದಾಣವನ್ನು 10 ನಿಮಿಷ ತಡವಾಗಿ ತಲುಪಿದ್ದರು. ಇದರಿಂದ ಅವರಿಗೆ ವಿಮಾನ ಏರಲು ಅನುಮತಿ ನಿರಾಕರಿಸಲಾಗಿತ್ತು. ಇದಾದ ಕೆಲವೇ ನಿಮಿಷಗಳಲ್ಲಿ ವಿಮಾನ ಅಪಘಾತದ ಸುದ್ದಿ ಬಂದಿದ್ದು, ಮಹಿಳೆ, ಮಾಧ್ಯಮಗಳ ಮುಂದೆ ಗದ್ಗದಿತರಾಗಿದ್ದಾರೆ.

ಈ ವಿಚಾರ ಕೇಳಿ ನನಗೆ ಭಯವಾಗಿ ಕೈಕಾಲುಗಳು ನಡುಗಲು ಪ್ರಾರಂಭಿಸಿದವು. ನಾನು ತುಂಬಾ ಹೊತ್ತು ಅದೇ ಆಘಾತದಲ್ಲಿದ್ದೆ. ಕೇವಲ 10 ನಿಮಿಷ ತಡವಾಗಿ ಬಂದಿದ್ದರಿಂದ ವಿಮಾನ ತಪ್ಪಿಸಿಕೊಂಡು ಬದುಕುಳಿದೆ. ನನ್ನ ನೆಚ್ಚಿನ ದೇವರಾದ ಗಣಪತಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನನ್ನ ಗಣಪತಿ ಬಪ್ಪಾ ನನ್ನನ್ನು ಉಳಿಸಿದ ಎಂದು ಹೇಳಿಕೊಂಡಿದ್ದಾರೆ.

 

 

ಭೂಮಿ ತಮ್ಮ ಪತಿಯೊಂದಿಗೆ ಲಂಡನ್‌ನಲ್ಲಿ ವಾಸವಾಗಿದ್ದರು. ರಜೆ ಇದ್ದ ಕಾರಣ ಭಾರತಕ್ಕೆ ಬಂದಿದ್ದರು. ಅವರ ಪತಿ ಈಗ ಬ್ರಿಟನ್‌ನಲ್ಲಿದ್ದಾರೆ. ಭೂಮಿ ಎರಡು ವರ್ಷಗಳ ಹಿಂದೆ ಲಂಡನ್‌ಗೆ ತೆರಳಿದ್ದರು. ಇದಾದ ಬಳಿಕ ಮೊದಲ ಬಾರಿಗೆ ಅವರು ಭಾರತಕ್ಕೆ ಬಂದಿದ್ದರು.

 

 

 

 

 

 

 


 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version