Published
9 months agoon
By
Akkare News
ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಪೋಷಕರ ಸಭೆ ಭಾನುವಾರ ಶಾಲಾ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಶಾಲಾ ಮುಂದಿನ ಶೈಕ್ಷಣಿಕ ಚಟುವಟಿಕೆಗಳು, ಶಾಲಾ ನೀತಿ, ನಿಯಮಗಳ ಕುರಿತು ಚರ್ಚಿಸಲಾಯಿತು.
ಮುಖ್ಯ ಅತಿಥಿಯಾಗಿ ದಾಮೋದರ ಶೆಣೈ ಮಾತನಾಡಿದರು. ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಜಯರಾಮ ಕೆದಿಲಾಯ ಶಿಬರ, ಸಂಚಾಲಕ ಭಾಸ್ಕರ ಆಚಾರ್ಯ ಹಿಂದಾರು, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಕಾರ್ಯದರ್ಶಿ ಕೃಷ್ಣಪ್ರಸಾದ್ ಕೆದಿಲಾಯ, ಸದಸ್ಯ ಹರೀಶ್ ಮುಖ್ಯ ಶಿಕ್ಷಕ ಪ್ರಸನ್ನ, ಕೆ., ಉಪಸ್ಥಿತರಿದ್ದರು. ಸಭೆಯಲ್ಲಿ ಮಕ್ಕಳ ಪೋಷಕರು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.














