Published
8 hours agoon
By
Akkare Newsಜೂ. 16. ದೇಶದಲ್ಲಿ ಜನಗಣತಿ ಸರ್ವೆ ನಡೆಸಲು ಕೇಂದ್ರ ಸರ್ಕಾರ ಅಧಿಸೂಚನೆ ಪ್ರಕಟಿಸಿದ್ದು, ಇದಕ್ಕೂ ಮೊದಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರದಂದು ಈ ಕಾರ್ಯದ ಸಿದ್ಧತೆಗಳನ್ನು ಪರಿಶೀಲಿಸಿದರು.
ಜನಸಂಖ್ಯಾ ಜನಗಣತಿಯನ್ನು ಎರಡು ಹಂತಗಳಲ್ಲಿ ಅಂದರೆ 2026 ಅಕ್ಟೋಬರ್ 1ರಂದು ಮತ್ತು 1 ಮಾರ್ಚ್ 2027ರಂದು ನಡೆಸಲಾಗುವುದು ಎಂದು ಸರಕಾರ ತಿಳಿಸಿದೆ. ಸುಮಾರು 34 ಲಕ್ಷ ಗಣತಿದಾರರು, ಮೇಲ್ವಿಚಾರಕರು ಮತ್ತು 1.3 ಲಕ್ಷ ಜನಗಣತಿ ಕಾರ್ಯಕರ್ತರನ್ನು ಈ ಕಾರ್ಯಕ್ಕೆ ನಿಯೋಜಿಸಲಾಗುವುದು ಎಂದು ತಿಳಿದುಬಂದಿದೆ.