Published
12 months agoon
By
Akkare News
ಮಂಗಳೂರು: ಮನೆಯಲ್ಲಿ ತಂದೆ ಸೇದಿ ಎಸೆದಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ 10 ತಿಂಗಳ ಮಗುವೊಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃ*ತಪಟ್ಟಿದೆ.
ಅಡ್ಯಾರ್‌ನಲ್ಲಿ ವಾಸವಿದ್ದ ಬಿಹಾರ ಮೂಲದ ದಂಪತಿಯ ಮಗು ಅನೀಶ್ ಕುಮಾರ್ ಮೃತ ಮಗು. ಶನಿವಾರ ಮಧ್ಯಾಹ್ನ 1.30ರ ವೇಳೆಗೆ ಘಟನೆ ಸಂಭವಿಸಿದೆ. ಅಸ್ವಸ್ಥಗೊಂಡಿದ್ದ ಮಗುವನ್ನು ಅಪರಾಹ್ನ 3.30ರ ವೇಳೆಗೆ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆದರೆ ರವಿವಾರ ಬೆಳಗ್ಗೆ 10.25ರ ವೇಳೆಗೆ ಚಿಕಿತ್ಸೆಗೆ ಸ್ಪಂದಿಸದೆ ಮಗು ಮೃತಪಟ್ಟಿದೆ.
.ಪತಿಯ ನಿರ್ಲಕ್ಷ್ಯವೇ ಕಾರಣ
‘ತನ್ನ ಪತಿಯ ನಿರ್ಲಕ್ಷ್ಯದಿಂದಲೇ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡು ಮಗು ಮೃತಪಟ್ಟಿದೆ. ಮನೆಯೊಳಗೆ ಬೀಡಿ ಸೇದಿ ಎಸೆಯದಂತೆ ಗಂಡನಿಗೆ ಹಲವು ಬಾರಿ ತಿಳಿಸಿದ್ದರೂ ನಿರ್ಲಕ್ಷಿಸಿದ ಪರಿಣಾಮ ಮಗುವಿನ ಪ್ರಾಣ ಹೋಗಿದೆ’ ಎಂದು ತಾಯಿ ದೂರಿನಲ್ಲಿ ಆರೋಪಿಸಿದ್ದಾರೆ.