Connect with us

ಇತರ

ಶಾಲೆ ಮಕ್ಕಳಿಗೆ ಮನೆ ಮಾತದ ದ.ಕ ಜಿಲ್ಲಾಧಿಕಾರಿ ವರ್ಗಾವಣೆ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಹೆಚ್ ವಿ

Published

on

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆಯ ಹೆಸರುವಾಸಿಯಾದ ಹಾಗೂ ಶಾಲಾ ಮಕ್ಕಳ ಬಾಯಲ್ಲಿ ಸದಾ ನೆನಪು ಉಳಿಯುವ ಮಳೆ ಬರುವಾಗ ಶಾಲೆಗಳಿಗೆ ರಜೆ ಘೋಷಣೆ ಮಾಡಿದ ಜಿಲ್ಲಾಧಿಕಾರಿ ಇಂದು ವರ್ಗಾವಣೆಗೊಂಡಿದ್ದಾರೆ. ಬೆಂಗಳೂರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ ದರ್ಶನ್ ಎಚ್ ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.

ಮುಲ್ಲೈ ಮುಗಿಲನ್ ಅವರನ್ನು ಇನ್ಸ್‌ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಆಂಡ್ ಸ್ಟಾಂಪ್ಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿರುವ ದರ್ಶನ್ ಎಚ್‌ವಿ ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತರಾಗಿದ್ದರು.

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version