Published
10 months agoon
By
Akkare News
ಬೆಂಗಳೂರು: ಮಹಿಳೆಯನ್ನು ಅತ್ಯಾಚಾರಕ್ಕೆ ಯತ್ನಿಸಿದ್ದಲ್ಲದೆ, ಆಕೆಯನ್ನು ಬೆತ್ತಲೆಯಾಗುವಂತೆ ಮಾಡಿ ಅದನ್ನು ವಿಡಿಯೋ ಮಾಡಿ ಬ್ಲ್ಯಾಕ್ಮೇಲ್ ಮಾಡಿರುವ ಆರೋಪದಲ್ಲಿ ಕೇರಳದ ಪೆರಿಂಗೋಟ್ಟುಕ್ಕಾರ ದೇವಸ್ಥಾನದ ಅರ್ಚಕ ಅರುಣ್ ಎಂಬಾತನನ್ನು ಬೆಂಗಳೂರಿನ ಬೆಳ್ಳಂದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ, ಮುಖ್ಯ ಅರ್ಚಕ ಉನ್ನಿ ದಾಮೋದರನ್ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಶೋಧ ಆರಂಭಿಸಿದ್ದಾರೆ.
ಪೂಜೆ ಮಾಡಿಸಲೆಂದು ಕೇರಳದ ಪೆರಿಂಗೋಟ್ಟುಕ್ಕಾರ ದೇವಸ್ಥಾನಕ್ಕೆ ತೆರಳಿದ್ದ ಮಹಿಳೆಗೆ ಮಾಟ ಮಾಂತ್ರದ ಬೆದರಿಕೆಯೊಡ್ಡಿ ಮುಖ್ಯ ಅರ್ಚಕ ಹಾಗೂ ಮತ್ತೋರ್ವ ಅರ್ಚಕ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
.ಕೌಟುಂಬಿಕ ಸಮಸ್ಯೆಯಿಂದ ಬಳಲುತ್ತಿದ್ದ ಈ ಮಹಿಳೆಯು ಕೇರಳ ರಾಜ್ಯದ ಪೆರಿಂಗೋಟ್ಟುಕ್ಕಾರ ದೇವಾಲಯದ ಬಗ್ಗೆ ಕೇಳಿ ತಿಳಿದಿದ್ದರು. ಆದ್ದರಿಂದ ಅಲ್ಲಿಗೆ ಪೂಜೆ ಮಾಡಿಸಲೆಂದು ತೆರಳಿದ್ದರು. ಈ ವೇಳೆ ಪರಿಚಯವಾಗಿದ್ದ ಅರ್ಚಕರು, ಪೂಜೆಯ ಹೆಸರಿನಲ್ಲಿ ಮತ್ತು ಮಾಟ-ಮಂತ್ರ ಹೆಸರಿನಲ್ಲಿ ಮಹಿಳೆಯೊಂದಿಗೆ ವಾಟ್ಸ್ಆ್ಯಪ್ ವಿಡಿಯೋ ಕಾಲ್ ಮೂಲಕ ಅಸಭ್ಯವಾಗಿ ವರ್ತಿಸಿದ್ದಾರೆ. ಅಲ್ಲದೆ, ಮತ್ತೊಂದು ಪೂಜೆ ಮಾಡಿಸುವುದಾಗಿ ಕರೆಸಿಕೊಂಡು ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾರೆ ಎಂದು ಬೆಳ್ಳಂದೂರು ಠಾಣೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಸಂತ್ರಸ್ತೆ ಮಹಿಳೆ ಉಲ್ಲೇಖಿಸಿದ್ದಾರೆ.
ಪೂಜೆಗೆಂದು ದೇವಸ್ಥಾನಕ್ಕೆ ಬಂದ ಸಂದರ್ಭದಲ್ಲಿ, ಸಂತ್ರಸ್ತೆಗೆ ಅರ್ಚಕರೊಂದಿಗೆ ಮಲಯಾಳಂ ಭಾಷೆಯಲ್ಲಿ ಮಾತನಾಡಲು ಸಾಧ್ಯವಾಗಲಿಲ್ಲ. ಆಕೆಗೆ ತಮಿಳು ಮತ್ತು ಕನ್ನಡವಷ್ಟೇ ಬರುತ್ತಿತ್ತು. ಆಗ ಅರ್ಚಕ ಅರುಣ್ ಪರಿಚಯವಾಗಿದ್ದಾನೆ. ಆತ ತಮಿಳಿನಲ್ಲಿ ಮಾತನಾಡಿ ಅದನ್ನು ಅರ್ಚಕರಿಗೆ ತಿಳಿಸಿದ್ದಾನೆ. ಬಳಿಕ 24 ಸಾವಿರ ರೂ. ಕೊಟ್ಟರೆ ಪೂಜೆ ಮಾಡಿಸಿಕೊಡುವುದಾಗಿ ಭರವಸೆ ನೀಡಿದ್ದಾನೆ. ಮೊಬೈಲ್ ಸಂಖ್ಯೆ ಪಡೆದುಕೊಂಡಿದ್ದ ಆತ, ಸಂತ್ರಸ್ತೆ ಬೆಂಗಳೂರಿಗೆ ಬಂದ ಬಳಿಕ ಹಲವು ಬಾರಿ ಕರೆ ಮಾಡಿದ್ದ.