Connect with us

ಇತರ

ಉಪ್ಪಿನಂಗಡಿ: ಕುಮಾರಧಾರ ನದಿಯಲ್ಲಿ ಮೊಸಳೆ ಪ್ರತ್ಯಕ್ಷ

Published

on

ಉಪ್ಪಿನಂಗಡಿ: ಇಲ್ಲಿನ ಕುಮಾರಧಾರಾ ನದಿಯ 34 ನೆಕ್ಕಿಲಾಡಿ ಸಮೀಪ ದಡದಲ್ಲಿ ಮೊಸಳೆಯೊಂದು ಪತ್ತೆಯಾಗಿದೆ. ಮೊಸಳೆಯನ್ನು ನೋಡಲು ಜನ ಜಮಾಯಿಸುತ್ತಿದ್ದಂತೆ ಮೊಸಳೆಯು ಬಾಯನ್ನು ಅಗಲಿಸಿ ಆಕ್ರಮಣಕಾರಿ ವರ್ತನೆ ತೋರಿ ನದಿ ನೀರಿಗೆ ಇಳಿದು ಹೋದ ಘಟನೆ ಬುಧವಾರ ಸಾಯಂಕಾಲ ನಡೆದಿದೆ.

ಇಲ್ಲಿನ ಶೇಖಬ್ಬ ಹಾಜಿ ಎಂಬವರ ಮನೆ ಬಳಿ ಕುಮಾರಧಾರಾ ನದಿ ದಡದಲ್ಲಿ ಮೊಸಳೆಯೊಂದು ವಿಶ್ರಾಂತಿ ಪಡೆಯುವುದನ್ನು ಮಕ್ಕಳು ದೂರದಿಂದ ಕಂಡಿದ್ದರು. ಇದನ್ನು ತಿಳಿದು ಸ್ಥಳೀಯರು ಹತ್ತಿರಕ್ಕೆ ಹೋದಾಗ ಮೊಸಳೆಯು ಬಾಯಿ ಅಗಲಿಸಿ ಆಕ್ರಮಣಕಾರಿಯಾಗಿ ವರ್ತಿಸಿ ಮತ್ತೆ ನದಿ ನೀರಿಗೆ ಇಳಿದು ಕಣ್ಮರೆಯಾಗಿದೆ.

 

 


 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version