Published
9 months agoon
By
Akkare News
ಪುತ್ತೂರು : ಕೆಂಪು ಕಲ್ಲು ಗಣಿಗಾರಿಕೆ, ಮರಳುಗಾರಿಕೆಯನ್ನು ಕಾನೂನು ಚೌಕಟ್ಟಿನೊಳಗೆ ತರುವ ಬಗ್ಗೆ ಚರ್ಚಿಸಲು ಸಭೆ ಕರೆದಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.


ಪತ್ರಕರ್ತರ ಜತೆ ಮಾತನಾಡಿದ ಅವರು, ಅವೆಲ್ಲವೂ ಕಾನೂನು ಬಾಹಿರವಾಗಿ ನಡೆಯುತ್ತಿತ್ತು. ಹಾಗಾಗಿ ಅವುಗಳನ್ನು ಸ್ಥಗಿತಗೊಳಿಸಲಾಗಿದೆ. ಕಾನೂನು ರೀತಿಯಲ್ಲಿ ನಡೆಯಬೇಕು. ಅದಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಎಸ್‌ಪಿ ಕಚೇರಿ ಪುತ್ತೂರಿಗೆ ಸ್ಥಳಾಂತರಿಸುವ ಬಗ್ಗೆ ಹಲವರ ಅಭಿಪ್ರಾಯ ಬಂದಿದ್ದು, ಗೃಹ ಸಚಿವರ ಜತೆ ಚರ್ಚಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.













