Connect with us

ಇಲಾಖಾ ಮಾಹಿತಿ

ಸರಕಾರಿ ಮತ್ತು ಅನುದಾನಿತ ಮಕ್ಕಳಿಗೆ ಸಿಹಿ ಸುದ್ದಿ ತಿಂಗಳ 3ನೇ ಶನಿವಾರ ಬ್ಯಾಗ್ ರಹಿತ “ಸಂಭ್ರಮದ ಶನಿವಾರ”

Published

on

ಶಾಲಾ ಮಕ್ಕಳಿಗೆ ಬ್ಯಾಗ್ ಹೊರೆಯಾಗುತ್ತಿರುವ ಆರೋಪಗಳು ಕೇಳಿ ಬರುತ್ತಿರುವ ಹೊತ್ತಿನಲ್ಲಿ ತಿಂಗಳಲ್ಲಿ ಒಂದು ದಿನ ಮಕ್ಕಳಿಗೆ ಬ್ಯಾಗ್ ರಹಿತ ದಿನ ವನ್ನಾಗಿ ಆಚರಿಸುವ ಮೂಲಕ ಮಕ್ಕಳ ಮನೋಬಲ ಹೆಚ್ಚಿಸಲು ರಾಜ್ಯ ಶಿಕ್ಷಣ ಇಲಾಖೆ ಮಹತ್ವದ ಕ್ರಮಗಳನ್ನು ಕೈಗೊಂಡಿದೆ.

2025-26 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಪ್ರತಿ ತಿಂಗಳ 3 ನೇ ಶನಿವಾರ ಬ್ಯಾಗ್ ರಹಿತ ‘ಸಂಭ್ರಮ ಶನಿವಾರ’ ಆಚರಿಸಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

 

ರಾಜ್ಯದ ಉರ್ದು ಶಾಲೆಗಳಲ್ಲಿ ಶನಿವಾರ ಪೂರ್ಣ ದಿನವಾಗಿದ್ದರಿಂದ ಶುಕ್ರವಾರ ಅರ್ಧ ದಿನ ಶಾಲೆ ನಡೆಯಲಿದೆ. ಹಾಗಾಗಿ ಪ್ರತಿ ತಿಂಗಳ ಮೂರನೇ ಶುಕ್ರವಾರದಂದು ಬ್ಯಾಗ್ ರಹಿತ ದಿನ ಆಚರಿಸಲು ತಿಳಿಸಿದೆ.

 

ಸಂಭ್ರಮ ಶನಿವಾರ ದಿನದಂದು ಜಿಲ್ಲಾ ಹಂತ ಮತ್ತು ಬ್ಲಾಕ್ ಹಂತದ ಎಲ್ಲಾ ಅಧಿಕಾರಿಗಳು ಹಾಗೂ ಸಿಆರ್ ಪಿಗಳು ಶಾಲೆಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ ಅಗತ್ಯ ಮಾರ್ಗದರ್ಶನ ನೀಡುವ ಮೂಲಕ ಕಾರ್ಯಕ್ರಮದ ಯಶಸ್ಸಿನಲ್ಲಿ ಪಾಲ್ಗೊಳ್ಳಬೇಕು. ಮಕ್ಕಳನ್ನು ಬಹುಮುಖ ಚಟುವಟಿಕೆಗಳಲ್ಲಿ ತೊಡಗಿಸುವ ಮೂಲಕ ನಾಗರಿಕ ಪ್ರಜ್ಞೆ ಬೆಳೆಸಲು ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗಾಗಿ 10 ಸ್ವಯಂ ವಿವರಣಾತ್ಮಕ ಘಟಕಗಳನ್ನು ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಗಳನ್ನು ಸಿದ್ಧಪಡಿಸಿದೆ.


 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version