Published
9 months agoon
By
Akkare News
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿ ವೇಗದಲ್ಲಿದ್ದ ಖಾಸಗಿ ಬಸ್ಸೊಂದು ಹಿಂಬದಿಯಿಂದ ಟ್ರಕ್ಕಿಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿ, ಟ್ರಕ್ ಪಲ್ಟಿಯಾಗಿದೆ. ಘಟನೆಯಲ್ಲಿ ಟ್ರಕ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿ ಎಸ್ ಎಸ್ ಟ್ರಾವೇಲ್ಸ್ ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಬೆಳಗಾವಿ ಕಡೆಗೆ ಪ್ರಯಾಣಿಕರನ್ನ ಕರೆದುಕೊಂಡು ವೇಗದಲ್ಲಿ ಕರೆದುಕೊಂಡು ಬರುತ್ತಿದ್ದ ಬಸ್ ಟ್ರಕ್’ಗೆ ಹಿಂಬದಿ ಡಿಕ್ಕಿ ಹೊಡೆದಿದೆ. ಪರಿಣಾಮ ಟ್ರಕ್ ಹಿಂಬದಿ ಹಾಗೂ ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿವೆ. ರಭಸದಿಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಟ್ರಕ್ ಪಲ್ಟಿಯಾಗಿದೆ. ಘಟನೆಯಿಂದ ಟ್ರಕ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಸ್ಥಳೀಯರ ಸಹಾಯದೊಂದಿಗೆ ಬಸ್ ಚಾಲಕನನ್ನು ರಕ್ಷಣೆ ಮಾಡಿದ್ದಾರೆ. ಕಿತ್ತೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.