Published
9 months agoon
By
Akkare News
ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ಶಾಲಾ ವಿದ್ಯಾರ್ಥಿ ನಾಯಕರ ಆಯ್ಕೆ ಪ್ರಕ್ರಿಯೆ ನಡೆಯಿತು.


ಈ ಚುನಾವಣೆಯಲ್ಲಿ ಶಾಲಾ ನಾಯಕನಾಗಿ 10 ನೇ ತರಗತಿಯ ವಿದ್ಯಾರ್ಥಿ ಸಾತ್ವಿಕ್ ಪಿ ಎಸ್ ,ಉಪನಾಯಕನಾಗಿ 9ನೇ ತರಗತಿ ವಿದ್ಯಾರ್ಥಿಯಾದ ಧ್ಯಾನ್ ರೈ ಜಿ ಆಯ್ಕೆಗೊಂಡರು.

ಶಾಲಾ ಮುಖ್ಯೋಪಾಧ್ಯಾಯ ಪ್ರಸನ್ನ ಕೆ ಇವರ ನೇತೃತ್ವ ದಲ್ಲಿ 3ನೇ ತರಗತಿಯಿಂದ ಮೇಲ್ಪಟ್ಟ ವಿದ್ಯಾರ್ಥಿ ವಿದ್ಯಾರ್ಥಿನಿಯರು ಮತದಾನ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡರು.

ಸಹ ಶಿಕ್ಷಕಿಯಾರಾದ ಪ್ರಮೀಳಾ ಹಾಗೂ ಪ್ರಶಾಂತಿ ಪಿ ಚುನಾವಣಾ ಜವಾಬ್ದಾರಿಯನ್ನು ನಿರ್ವಹಿಸಿದರು. ಶಾಲಾ ಶಿಕ್ಷಕ ವೃಂದ ಮತಗಟ್ಟೆ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದರು.




