Connect with us

ಇತರ

ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : `ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!

Published

on

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2025-26ನೇ ಸಾಲಿಗೆ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್ಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಉಳಿದ ಸಮುದಾಯಗಳ ಆಸಕ್ತರಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ.


ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆನ್ನು ಸೀಡ್ ಮಾಡಿರಬೇಕು. ಒಂದು ಕುಟುಂಬದ ಒಬ್ಬರಿಗೆ ಮಾತ್ರ ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಲ್ಲ. 2023-24 ಮತ್ತು 2024-25 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವವರು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಆಸಕ್ತರು ಸೇವಾಸಿಂಧು ಪೋರ್ಟಲ್ https:/sevasindhu.karnataka.gov.in ಅಥವಾ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ದಾಖಲೆಗಳ ಸಹಿತ ಜೂನ್ 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://dbcdo.karnataka.gov.in ರಲ್ಲಿ ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಭಾಗ್ಯನಿಲಯ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ, ದೂ.ಸಂ.: 08182-229634 ನ್ನು ಸಂಪರ್ಕಿಸುವುದು.

ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ

ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು.

ಹಾಲಿ ಜಮೀನುಗಳು ಕೃಷಿ ಚಟುವಟಿಕೆಯಲ್ಲಿರಬೇಕು.

ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು.

ಫಲಾನುಭವಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.

ವಯಸ್ಸು 18 ರಿಂದ 60 ವರ್ಷದೊಳಗಿರಬೇಕು.

ಕುಟುಂಬ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98 ಸಾವಿರ ಹಾಗೂ ಪಟ್ಟಣ ಪ್ರದೇಶದವರಿಗೆ ರೂ. 1.20 ಲಕ್ಷಗಳು ಒಳಗಿರಬೇಕು.

ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ 02 ಎಕರೆ ಜಮೀನು ಹೊಂದಿರಬೇಕು.

ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ 4 ಲಕ್ಷ ಸಬ್ಸಿಡಿಯನ್ನು ನೀಡುವ ಮೂಲಕ ರಾಜ್ಯದ ರೈತರಿಗೆ ಬೋರ್ವೆಲ್ ಕೊರಸಿಕೊಳ್ಳುವ ಅವಕಾಶವನ್ನು ನೀಡಿದೆ.

 

ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ರೈತರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.

ಆಧಾರ್ ಕಾರ್ಡ್

ಬ್ಯಾಂಕ್ ಪಾಸ್ ಬುಕ್

ಜಾತಿ ಮತ್ತು ಆದಾಯ ಪ್ರಮಾಣ ಪತ್ರ

ಸ್ವಂತ ಜಮೀನಿನ ಪಹಣಿ

ಅರ್ಜಿದಾರರ ಭಾವಚಿತ್ರ

ಬಿಪಿಎಲ್ ರೇಷನ್ ಕಾರ್ಡ್

ಮೊಬೈಲ್ ಸಂಖ್ಯೆ

ಅರ್ಜಿದಾರರು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


 

Continue Reading
Click to comment

Leave a Reply

Your email address will not be published. Required fields are marked *

Advertisement