Published
12 months agoon
By
Akkare News
ಚಾರ್ಮಾಡಿ, ಸಂಪಾಜೆ ಮಾರ್ಗದಲ್ಲಿ ಸಂಚರಿಸಲು ಸೂಚನೆ
ಮಂಗಳೂರು: ಮಳೆ ಅಬ್ಬರಕ್ಕೆ ಸಕಲೇಶಪುರ ಬಳಿ ಶಿರಾಡಿ ಘಾಟಿಯಲ್ಲಿ ಭೂಕುಸಿತವಾಗಿದ್ದು ಬೆಂಗಳೂರು-ಮಂಗಳೂರು ಸಂಪರ್ಕ ಕಡಿತವಾಗಿದೆ.
ಸಕಲೇಶಪುರ ತಾಲ್ಲೂಕಿನ, ಮಾರನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಗುಡ್ಡ ಕುಸಿದ ಪರಿಣಾಮ ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ. ತಡರಾತ್ರಿ ಮರಗಳ ಸಮೇತ ರಸ್ತೆಗೆ ಅಡ್ಡಲಾಗಿ ಗುಡ್ಡ ಕುಸಿದ ಕಾರಣ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ವಾಹನ ಸವಾರರು ಪರದಾಡಿದ್ದಾರೆ.
ಮಂಗಳೂರು ಕಡೆಗೆ ತೆರಳುವ ವಾಹನಗಳಿಗೆ ಬೇಲೂರು ಮೂಲಕ ಚಾರ್ಮಾಡಿ ಘಾಟ್ ರಸ್ತೆ ಬಳಸಲು, ಮಂಗಳೂರು ಕಡೆಯಿಂದ ಬೆಂಗಳೂರಿಗೆ ತೆರಳುವ ವಾಹನಗಳು ಸಂಪಾಜೆ ಘಾಟ್ ಬಳಸುವಂತೆ ಹಾಸನ ಡಿಸಿ ಕೆ.ಎಸ್.ಲತಾಕುಮಾರಿ ಸೂಚಿಸಿದ್ದಾರೆ.