Published
9 months agoon
By
Akkare News
ಬೆಂಗಳೂರು : ಕಟ್ಟಡ ನಕ್ಷೆ ಅನುಮತಿ, ಸ್ವಾಧೀನ ಪ್ರಮಾಣ ಪತ್ರವಿಲ್ಲದೆ ನೀರು ಹಾಗೂ ವಿದ್ಯುತ್ ಸಂಪರ್ಕ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದೆ. ಇಡೀ ದೇಶಕ್ಕೆ ಈ ತೀರ್ಪು ಆನ್ವಯವಾಗಲಿದೆ.


ಈ ವಿಚಾರವಾಗಿ ಯಾವ ರೀತಿ ಕ್ರಮ ಕೈಗೊಳ್ಳಬಹುದು ಎಂದು ಅಧಿಕಾರಿಗಳ ಜತೆಗೂ ಚರ್ಚಿಸುತ್ತೇವೆ. ಕಾನೂನು ತಜ್ಞರು ಈ ಸಮಸ್ಯೆ ಯಾವ ರೀತಿ ಬಗೆಹರಿಸಬಹುದು ಎಂದು ಪ್ರಯತ್ನ ಮಾಡುತ್ತೇವೆ.


ಈ ಮಧ್ಯೆ ಕಟ್ಟಡ ನಕ್ಷೆ ಅನುಮೋದನೆ ಪಡೆಯದೇ ಯಾರೂ ಮನೆ ಕಟ್ಟಬೇಡಿ. ಈ ವಿಚಾರದಲ್ಲಿ ಅಕ್ರಮವಾಗಿ ಮನೆ ಕಟ್ಟಿದರೆ ಸಕ್ರಮ ಮಾಡುವುದು ಕಷ್ಟ. ನೀರು ಹಾಗೂ ವಿದ್ಯುತ್ ಸಂಪರ್ಕ ಸಿಗುವುದಿಲ್ಲ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತೆ ಇಂತಹ ಸಾಹಸಕ್ಕೆ ಕೈ ಹಾಕಬೇಡಿ.
ಡಿ ಕೆ ಶಿವಕುಮಾರ್







