Published
8 months agoon
By
Akkare News
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳು ಅನುಮಾನಾಸ್ಪದವಾಗಿ ಮೃತಪಟ್ಟಿವೆ. ಹುಲಿಗಳ ಮೃತದೇಹಗಳ ಬಳಿ ವಿಷಪ್ರಾಶನಗೊಂಡ ಹಸುವಿನ ಶವ ಕಂಡುಬಂದಿದೆ.
ಈ ಸಂಬಂದ ಅರಣ್ಯ ಇಲಾಖೆ ಐದು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ರಾಜ್ಯ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಉನ್ನತ ಮಟ್ಟದ ತಂಡವನ್ನು ರಚಿಸಿದೆ. ಮರಣೋತ್ತರ ಪರೀಕ್ಷೆಯ ವರದಿ ನಿರೀಕ್ಷಿಸಲಾಗುತ್ತಿದೆ. ಹುಲಿಗಳ ಮರಣೋತ್ತರ ಪರೀಕ್ಷೆ ಇಂದು ನಡೆಯಲಿದ್ದು, ವರದಿ ಕೈಸೇರಿದ ಬಳಿಕ ಸಾವಿಗೆ ನಿಖರ ಕಾರಣ ಏನೆಂಬುದು ಗೊತ್ತಾಗಲಿದೆ. ಹುಲಿಗಳ ಮೃತದೇಹಗಳು ದೊರೆತ ಸ್ಥಳದಲ್ಲಿಯೇ ಹಸುವಿನ ಶವ ಕೂಡ ಸಿಕ್ಕಿದ್ದು, ಹುಲಿಗಳಿಗೆ ವಿಶಪ್ರಾಷನ ಮಾಡಿಸಿರುವ ಶಂಕೆಗೆ ಕಾರಣವಾಗಿದೆ. ಹಸುವಿನ ಮೃತ ದೇಹದ ಬಾಲ ತುಂಡಾಗಿರುವುದು ಕಂಡು ಬಂದಿದೆ.