Published
8 months agoon
By
Akkare News
ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭವತಿಯಾದ ಬಳಿಕ ವಿವಾಹವಾಗಲು ನಿರಾಕರಿಸಿದ ಪ್ರಕರಣದಲ್ಲಿ ಗರ್ಭಿಣಿ ವಿದ್ಯಾರ್ಥಿನಿ ಶುಕ್ರವಾರ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ.
ಬಪ್ಪಳಿಗೆ ನಿವಾಸಿ ಕೃಷ್ಣ ರಾವ್ (21) ಆರೋಪಿ ಯುವಕ. ಪ್ರಕರಣ ದಾಖಲಾಗುತ್ತಲೇ ಆರೋಪಿ ತಲೆಮರೆಸಿಕೊಂಡಿದ್ದಾನೆ.
ಸಂತ್ರಸ್ತ ಯುವತಿಯು ನೀಡಿದ ದೂರಿನಂತೆ, 2024ರ ಅ. 11ರಂದು ಆರೋಪಿ ಕೃಷ್ಣ ಸಂತ್ರಸ್ತೆಯನ್ನು ತನ್ನ ಮನೆಗೆ ಕರೆಸಿಕೊಂಡು ಬಲವಂತದಿಂದ ದೈಹಿಕ ಸಂಪರ್ಕ ಮಾಡಿದ್ದಾನೆ. ಕೆಲವು ತಿಂಗಳ ಅನಂತರ ಸಂತ್ರಸ್ತೆ ಗರ್ಭಿಣಿಯಾದ ಬಳಿಕ ಈ ವಿಚಾರವನ್ನು ಆರೋಪಿ ಕೃಷ್ಣನಲ್ಲಿ ತಿಳಿಸಿದ್ದಾಳೆ.
ಈ ವೇಳೆ ಮನೆಮಂದಿ ಬಳಿ ಈ ವಿಚಾರ ಹೇಳದಿದ್ದರೆ ನಾನು ನಿನ್ನನ್ನು ಮದುವೆಯಾಗುವುದಾಗಿ ಆರೋಪಿ ಒಪ್ಪಿಸಿದ್ದ.ಆಕೆ ಗರ್ಭವತಿಯಾದ ಬಳಿಕ ವಿವಾಹವಾಗಲು ನಿರಾಕರಿಸಿದ ಆರೋಪದ ಮೇಲೆ ಸಹಪಾಠಿಯ ವಿರುದ್ಧ ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಪ್ರಕರಣ ದಾಖಲಾಗಿದೆ.ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಂತ್ರಸ್ತೆ ದೂರಿನಲ್ಲಿ ಕೋರಿದ್ದಾಳೆ.