Connect with us

ಇತರ

ಅವರು ಕಳೆದ 11 ವರ್ಷಗಳಿಂದ ಸುಳ್ಳನ್ನೇ ಬಂಡವಾಳವಾಗಿಸಿ ಬಿಜೆಪಿ ಕೇಂದ್ರ ಸರ್ಕಾರ ಜನರಿಗೆ ವಂಚಿಸಿದೆ ಆದರೂ ಜನರು ಅವರ ಸುಳ್ಳನ್ನು ನಂಬಿರುದೇ ವಿಪರ್ಯಾಸ : ರಮಾನಾಥ ರೈ ಮಾಜಿ ಸಚಿವರು

Published

on

ದಿನಾಂಕ 23.06.2025 ರಂದು ಬಿಜೆಪಿಯು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಕಾಂಗ್ರೇಸ್ ಸರಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಜನರಿಗೆ ತಪ್ಪು ಮಾಹಿತ ನೀಡಿರುತ್ತಾರೆ. ಇದರ ಸಲುವಾಗಿ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ವಿಟ್ಲ ಬ್ಲಾಕ್ ಕಾಂಗ್ರೇಸ್ ಮುಂದಾಳತ್ವದಲ್ಲಿ ಬ್ಲಾಕ್ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಸಣ್ಣಾಗುತ್ತು ರವರ ನೇತೃತ್ವದಲ್ಲಿ ವಿಟ್ಲ ಬ್ಲಾಕ್ ಕಾಂಗ್ರೇಸ್ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ‘ಬಿಜೆಪಿಯ ಸುಳ್ಳಿಗೆ ಕಾಂಗ್ರೆಸ್ ಉತ್ತರ’ ಜನಜಾಗೃತಿ ಸಭೆಯು ವಿಟ್ಲ ಬ್ಲಾಕ್ ವ್ಯಾಪ್ತಿಯ ಕೇಪು ವಲಯ ಕಾಂಗ್ರೆಸ್ ಆಶ್ರಯದಲ್ಲಿ ಅಡ್ಯನಡ್ಕ ಜಂಕ್ಷನ್ ನಲ್ಲಿ ನಡೆಯಿತು.

*ಈ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವರಾದ ರಮಾನಾಥ್ ರೈ ಅವರು ಕಳೆದ 11 ವರ್ಷಗಳಿಂದ ಸುಳ್ಳನ್ನೇ ಬಂಡವಾಳವಾಗಿಸಿ ಬಿಜೆಪಿ ಕೇಂದ್ರ ಸರ್ಕಾರ ಜನರಿಗೆ ವಂಚಿಸಿದೆ ಆದರೂ ಜನರು ಅವರ ಸುಳ್ಳನ್ನು ನಂಬಿರುದೇ ವಿಪರ್ಯಾಸ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿದ ಪಂಚ ಗ್ಯಾರಂಟಿ ಆಶ್ವಾಸನೆಯನ್ನು ಜಾರಿಗೊಳಿಸಿ ಸಮಾಜದ ಆರ್ಥಿಕವಾಗಿ ಹಿಂದುಳಿದವರ ಏಳಿಗೆಗೆ ಶ್ರಮಿಸಿದೇ ಅದನ್ನು ಸಹಿಸದ ಬಿಜೆಪಿ ಈ ರೀತಿಯ ಸುಳ್ಳನ್ನು ಹೇಳಿ ಜನರಿಗೆ ದಾರಿ ತಪ್ಪಿಸಲು ಪ್ರಯತ್ನಿಸಿದೆ ಎಂದರು*

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮುಹಮ್ಮದ್,ಪುತ್ತೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ದ ಕ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚಂದ್ರ ಆಳ್ವ,ಪುತ್ತೂರು ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ,ವಿಟ್ಲ ಮಸ್ಕಾ ಸಲಹಾ ಸಮಿತಿ ಸದಸ್ಯ ಕರೀಂ ಕುದ್ದುಪದವು,ಬ್ಲಾಕ್ ಎಸ್ ಟಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ,ದ.ಕ ಎಸ್ ಟಿ ವಿಭಾಗದ ಉಪಾಧ್ಯಕ್ಷ ಕೇಶವ ನಾಯ್ಕ,ಬ್ಲಾಕ್ ಉಪಾಧ್ಯಕ್ಷರಾದ ಜಯರಾಮ್ ಬಲ್ಲಾಳ್ ,ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ನಾಸಿರ್ ಕೋಲ್ಪೆ,ಏನ್ಮಕಜೆ ಗ್ರಾ ಪಂ ಮಾಜಿ ಸದಸ್ಯ ಐತಪ್ಪ ಕುಲಾಲ್,ಸಾಮಾಜಿಕ ಜಾಲತಾಣ ಅಧ್ಯಕ್ಷ ಅಬ್ಬು ನವಗ್ರಾಮ,ಕೇಪು ವಲಯ ಕಾಂಗ್ರೆಸ್ ಅಧ್ಯಕ್ಷ ಕೋಟಿ ಪೂಜಾರಿ,ಮಾಜಿ ವಲಯ ಕಾಂಗ್ರೆಸ್ ಅಧ್ಯಕ್ಷರುಗಳಾದ ಬಾಲಕೃಷ್ಣ ಶೆಟ್ಟಿ ಬೆಂಗ್ರೂಡಿ.ಸುಧಾಕರ ಪೂಜಾರಿ, ಸೇರಿದಂತೆ ಪಕ್ಷದ ನಾಯಕರು,ಮುಖಂಡರು, ಗ್ರಾಮ ಪಂಚಾಯಿತಿ ಸದಸ್ಯರುಗಳು, ಬೂತ್ ಅಧ್ಯಕ್ಷರುಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.


 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version