Connect with us

ರಾಜಕೀಯ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜಟಿಲ ಸಮಸ್ಯೆಯಾದ ಕೆಂಪು ಕಲ್ಲು- ಮರಳು ಸಾಗಾಟಕ್ಕೆ ಸೂಕ್ತ ಪರಿಹಾರಕ್ಕಾಗಿ ಮುಖ್ಯಮಂತ್ರಿಯನ್ನು ಭೇಟಿಯಾದ : ಮಾಜಿ ಸಚಿವ ರಮನಾಥ ರೈ

Published

on

ಬೆಂಗಳೂರು- ದ.ಕ.ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದ ಸರಣಿ ಕೊಲೆಗಳು ಮತೀಯ ಸಂಘರ್ಷಣೆಗಳನ್ನು ಮಟ್ಟ ಹಾಕುವ ಸಲುವಾಗಿ ಕರ್ನಾಟಕ ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ದ.ಕ.ಜಿಲ್ಲೆಯಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ ಸ್ಪೆಷಲ್ ಇನ್ವಷ್ಟಿಕೇಷನ್ ಟೀಮ್ ಇದನ್ನು ಸ್ಥಾಪಿಸುವ ಮೂಲಕ ಜಿಲ್ಲೆಯಲ್ಲಿ ಸೌಹಾರ್ದ ವಾತವಾರಣ ನಿರ್ಮಿಸುವ ಸಲುವಾಗಿ ಈ ಕಾರ್ಯವನ್ನು ದ.ಕ.ಜಿಲ್ಲೆಯಲ್ಲಿ ಸ್ಥಾಪಿಸಿದ್ದಾರೆ ಇದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಾಜಿ ಸಚಿವ ಬಿ ರಮನಾಥ್ ರೈ ಅವರು ಇಂದು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು .

ಜೊತೆಗೆ ದ.ಕ.ಜಿಲ್ಲೆಯಲ್ಲಿ ತಲೆದೂರಿರುವ ಜಟಿಲವಾಗಿರುವ ಕೆಂಪು ಕಲ್ಲು- ಮರಳಿನ ವಿಚಾರದಲ್ಲಿ ಸರಳವಾದ ರೀತಿಯ ಕಾನೂನು ಮಾಡುವ ಮೂಲಕ ಜಿಲ್ಲೆಯ ಜನಸಾಮಾನ್ಯರಿಗೆ ನ್ಯಾಯ ಒದಗಿಸಬೇಕು ಎಂದು ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರಿಗೆ ರಮನಾಥ್ ರೈ ಮನವಿ ಮಾಡಿದರು


ಈ‌ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬಂಟ್ವಾಳ ನಗರಾಭಿವೃದ್ಧಿ ಯೋಜನೆಯ ಅಧ್ಯಕ್ಷರಾದ ಶ್ರೀ ಬೇಬಿ ಕುಂದರ್ , ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾಜಿ ಸದಸ್ಯರಾದ ಶ್ರೀ ಪಿಯೋಷ್ ಎಲ್ ರೊಡ್ರಿಗೇಶ್, ಬಂಟ್ವಾಳ ಪುರಸಭಾ ಸದಸ್ಯರಾದ ಶರೀಫ್ , ಯುವ ನಾಯಕ ಶಬೀರ್ ಸಿದ್ದಕಟ್ಟೆ ಮತ್ತಿತರರು ಉಪಸ್ಥಿತರಿದ್ದರು.


 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version