Published
8 months agoon
By
Akkare News
ಬಂಟ್ವಾಳ: ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೆಳಗಿನ ತುಂಬೆ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಪಾವೂರು ನಿವಾಸಿ ನೌಫಲ್ ಮೃತಪಟ್ಟವರು ಎಂದು ಗುರುತಿಸಲಾಗಿದೆ.



ನೌಫಲ್ ಶನಿವಾರ ಬೆಳಿಗ್ಗೆ ಬಿ.ಸಿ.ರೋಡ್ ಕೈಕಂಬ ನಿವಾಸಿಯೋರ್ವರಿಂದ ಸ್ವಿಫ್ಟ್ ಕಾರು ಖರೀದಿಸಿ ಅದನ್ನು ತೆಗೆದುಕೊಂಡು ಹೋಗುವ ವೇಳೆ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.







