Published
8 months agoon
By
Akkare News
ಬೆಂಗಳೂರು: ರಾಜ್ಯ ಸರಕಾರವು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಆನಂದ್ ಸೇರಿದಂತೆ 13 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.
ರಾಜ್ಯ ರೇಶ್ಮೆ ಕೈಗಾರಿಕೆ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಝೆಹೆರಾ ನಸೀಮ್ ಅವರನ್ನು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ, ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರನ್ನು ಇ ಆಡಳಿತ ಇಲಾಖೆಯ ಇ ಆಡಳಿತ ಕೇಂದ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಯಾದಗಿರಿ ಜಿಲ್ಲಾಧಿಕಾರಿ ಡಾ.ಬಿ.ಸುಶೀಲಾ ಅವರನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಆನಂದ್ ಅವರನ್ನು ವಿಜಯಪುರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ರಾಯಚೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಾಂಡ್ವೆ ರಾಹುಲ್ ತುಕಾರಾಮ್ ಅವರನ್ನು ಕಲಬುರಗಿ ಜಿಲ್ಲೆಯ ಸಾರ್ವಜನಿಕ ನಿರ್ದೇಶನಾಲಯದ ಹೆಚ್ಚುವರಿ ಆಯುಕ್ತ, ಅಟಲ್ ಜನ ಸ್ನೇಹಿ ಕೇಂದ್ರದ ನಿರ್ದೇಶಕ ಭೋಯಾರ್ ಹರ್ಷಲ್ ನಾರಾಯಣ ರಾವ್ ಅವರನ್ನು ಯಾದಗಿರಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಇ ಆಡಳಿತ ಇಲಾಖೆಯ ಇ ಆಡಳಿತ ಕೇಂದ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಶ್ ಶಶಿ ಅವರನ್ನು ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹಾಗೂ ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ್ ಕುಮಾರ್ ಖಂಡೂ ಅವರನ್ನು ರಾಯಚೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಅಪರ್ಣಾ ರಮೇಶ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(ಇ ಆಡಳಿತ)ಯ ಇಡಿಸಿಎಸ್ ನಿರ್ದೇಶಕಿಯಾಗಿ ನಿಯೋಜನೆ ಮಾಡಲಾಗಿದೆ. ಅಲ್ಲದೇ, ಹಣಕಾಸು ಇಲಾಖೆಯ ಎಚ್.ಆರ್.ಎಂ.ಎಸ್ 2.0ನ ಉಪ ಯೋಜನಾ ನಿರ್ದೇಶಕಿಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.