Connect with us

ಇತರ

ಸಾಂದೀಪನಿಯಲ್ಲಿ ಗುರು ಪೂರ್ಣಿಮೆ

Published

on

ಪುತ್ತೂರು: ನರಿಮೊಗರಿನ ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ದಿನಾಂಕ 10/07/25 ರಂದು ಗುರುಪೂರ್ಣಿಮೆಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಜಯರಾಮ ಕೆದಿಲಾಯ ಶಿಬರ, ಸಂಚಾಲಕರಾದ ಶ್ರೀ ಭಾಸ್ಕರ್ ಆಚಾರ್ ಹಿಂದಾರ್,ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಪ್ರಸನ್ನ ಕೆ ಮತ್ತು ಶಿಕ್ಷಕ ಶಿಕ್ಷಕೇತರ ವೃoದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯರು ಗುರು ಪೂರ್ಣಿಮೆಯ ವಿಶೇಷತೆಯನ್ನು ತಿಳಿಸಿದರು.
ಸಂಚಾಲಕರು ಮಾತನಾಡಿ ನಮಗೆ ದಾರಿ ತೋರಿಸುವವರು ಹಾಗೂ ನಮ್ಮ ತಪ್ಪುಗಳನ್ನು ತಿದ್ದಿ ಸರಿಯಾದ ದಾರಿಗೆ ಕರೆದುಕೊಂಡು ಹೋಗುವವರು ಗುರು, ಅದಕ್ಕಾಗಿ ಗುರುಹಿರಿಯರಿಗೆ ಗೌರವ ಕೊಟ್ಟು ಸನ್ಮಾರ್ಗದಲ್ಲಿ ನಡೆಯಿರಿ ಎಂದರು.

ಅಧ್ಯಕ್ಷರಾದ ಶ್ರೀಯುತ ಜಯರಾಮ ಕೆದಿಲಾಯ ಶಿಬರ ರವರು ವ್ಯಾಸರ ಕೊಡುಗೆಯನ್ನು ತಿಳಿಸುತ್ತಾ, ಗುರು ಎಂದರೆ ಜ್ಞಾನ. ಜ್ಞಾನ ಎಂದರೆ ಬೆಳಕು. ಮನಸ್ಸಿನ ಕಲ್ಮಶವನ್ನು ತೆಗೆದಾಗ ಜ್ಞಾನವನ್ನು ಪಡೆಯಲು ಸಾಧ್ಯ ಜೀವನದಲ್ಲಿ ಯಶಸ್ಸು ನಿಮ್ಮದಾಗಲಿ ಎಂದು ಹಾರೈಸುತ್ತಾ ಸ್ಪೂರ್ತಿಯ ಮಾತುಗಳನ್ನಾಡಿ ಗುರುಪೂರ್ಣಿಮೆಯ ಶುಭಾಶಯ ತಿಳಿಸಿದರು.

ನಂತರ ಜಗದ್ಗುರುಗಳಾದ ಶ್ರೀ ವೇದವ್ಯಾಸ ಮಹರ್ಷಿಗಳ ಭಾವಚಿತ್ರಕ್ಕೆ ಎಲ್ಲರಿಂದ ಪುಷ್ಪಾರ್ಚನೆ ಗಯ್ಯಲಾಯಿತು. ಶ್ರೀಮತಿ ಸೌಮ್ಯ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಉಷಾ ರವರು ಎಲ್ಲರನ್ನು ಸ್ವಾಗತಿಸಿದರು.ಶ್ರೀಮತಿ ಭವಿತಾರವರು ಧನ್ಯವಾದ ಗೈದರು.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version