Published
8 months agoon
By
Akkare News
ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಅವರ ನೇತೃತ್ವದ ರೈ ಎಸ್ಟೇಟ್ಸ್ ಎಜುಕೇಶನಲ್‌ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ವರ್ಷಂಪ್ರತಿ ನಡೆಯುವ ದೀಪಾವಳಿ ಆಚರಣೆಯ ಬಗ್ಗೆ ರೂಪುರೇಶೆಗಳ ಬಗ್ಗೆ ಚರ್ಚಿಸುವ ಸಲುವಾಗಿ ಟ್ರಸ್ಟ್ ನ ಪೂರ್ವಭಾವಿ ಸಭೆಯು ಜು.10 ರಂದು ಶಾಸಕರ ಕಚೇರಿ ಸಭಾಭವನದಲ್ಲಿ ನಡೆಯಿತು.
ಟ್ರಸ್ಟ್ ಗೌರವ ಸಲಹೆಗಾರರಾದ ಸುಮಾ ಅಶೋಕ್ ರೈ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಸಭೆಯಲ್ಲಿ ದೀಪಾವಳಿ ಆಚರಣೆ ಈ ಬಾರಿ ಯಾವ ರೀತಿಯಲ್ಲಿ ಆಚರಿಸಬೇಕು ಎಂಬ ವಿಚಾರದಲ್ಲಿ ಚರ್ಚೆ ನಡೆಸಲಾಯಿತು.ಸಭೆಯಲ್ಲಿದ್ದ ಸದಸ್ಯರು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಅಕ್ಟೋಬರ್ ತಿಂಗಳಲ್ಲಿ ಕಾರ್ಯಕ್ರಮ ನಡೆಸುವ ಬಗ್ಗೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ವಿಜೃಂಬಣೆಯಿಂದ ಈ ಬಾರಿಯೂ ಆಚರಣೆ; ಸುಮಾ ಅಶೋಕ್ ರೈ ಅವರು ಮಾತನಾಡಿ ಪ್ರತೀ ವರ್ಷದಂತೆ ಈ ಬಾರಿಯೂ ವಿಜೃಂಬಣೆಯಿಂದ ಆಚರಣೆ ಮಾಡಲಾಗುತ್ತದೆ ಶಾಸಕ ಅಶೋಕ್ ರೈ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು ಕಳೆದ ಬಾರಿ ಸುಮಾರು 65 ಸಾವಿರ ಮಂದಿ ಭಾಗವಹಿಸಿದ್ದು ಈ ಬಾರಿ ಕಳೆದ ಬಾರಿಗಿಂದ ಹೆಚ್ಚಿನ ಜನರ ಜೊತೆಗೂಡಿ,ಸಹಭೋಜನ ನಡೆಸುವ ಮೂಲಕ ದೀಪಾವಳಿ ಆಚರಣೆ ಮಾಡಲಿದ್ದೇವೆ ಎಂದು ಟ್ರಸ್ಟ್ ಗೌರವ ಸಕಹೆಗಾರರಾದ ಸುಮಾ ಅಶೋಕ್ ರೈ ತಿಳಿಸಿದ್ದಾರೆ.
ಜನರ ಜೊತೆ ದೀಪಾವಳಿ : ಸುದೇಶ್ ಶೆಟ್ಟಿ
ಕಳೆದ12 ವರ್ಷಗಳೊಂದಿಗೆ ಶಾಸಕ ಅಶೋಕ್ ರೈ ಅವರು ತಮ್ಮ ಟ್ರಸ್ಟ್ ಮೂಲಕ ಜನರ ಜೊತೆ ಸಹಭೋಜನ ನಡೆಸುವ ಮೂಲಕ ದೀಪಾವಳಿ ಆಚರಣೆ ಮಾಡುತ್ತಿದ್ದಾರೆ. ಈ ಬಾರಿ 13 ನೇ ವರ್ಷದ ಕಾರ್ಯಕ್ರಮ .ಶಾಸಕರಾದ ಬಳಿಕ ಮೂರನೇ ದೀಪಾವಳಿ ಕಾರ್ಯಕ್ರಮ ನಡೆಯುತ್ತಿದೆ. ಕಳೆದ ಅವಧಿಯಲ್ಲಿ ಜನರಿಂದ ಉತ್ತಮ ಸ್ಪಂದನೆ ಮತ್ತು ಸಹಕಾರ ದೊರಕಿದೆ.ಈ ಬಾರಿಯೂ ಅದೇ ನಿರೀಕ್ಷೆಯಲ್ಲಿದ್ದೇವೆ. ಬಡವ,ಶ್ರೀಮಂತ,ಜಾತಿ, ಧರ್ಮದ ಎಲ್ಲೆಯನ್ನು ಮೀರಿ ಎಲ್ಲರನ್ನೂ ಸೇರಿಸಿಕೊಂಡು ಈ ಬಾರಿಯೂ ದೀಪಾವಳಿ ಆಚರಣೆ ನಡೆಯಲಿದೆ ಎಂದು ಟ್ರಸ್ಟ್ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ ಹೇಳಿದರು.