Connect with us

ಇತರ

ಲಂಚಕ್ಕೆ ಬೇಡಿಕೆ ಆರೋಪ : ಲೋಕಾಯುಕ್ತ ಬಲೆಗೆ ಬಿದ್ದ ಹೆಡ್‌ಕಾನ್ಸ್‌ಟೇಬಲ್…!!

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಕಾರು ಮತ್ತು ಸ್ಕೂಟರ್ ಮಧ್ಯೆ ಸಂಭವಿಸಿದ ಅಪಘಾತಕ್ಕೆ ಸಂಬಂಧಿಸಿ ಕಾರನ್ನು ಠಾಣೆಯಿಂದ ಬಿಡಿಸಿಕೊಳ್ಳಲು ಲಂಚಕ್ಕೆ ಬೇಡಿಕೆಯಿಟ್ಟ ಕದ್ರಿ ಟ್ರಾಫಿಕ್ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ನಂತೂರು ಸರ್ಕಲ್‌ನಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ತಸ್ಲಿಂ,
ಕಾರಿನ ದಾಖಲಾತಿಗಳನ್ನು ಪೊಲೀಸ್ ಠಾಣೆಗೆ ತಂದು ಕೊಡುವಂತೆ ಸೂಚಿಸಿದ್ದು, ಅದರಂತೆ ಕಾರಿನ ಮಾಲಕರು ಎಲ್ಲವನ್ನೂ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು. ಬಳಿಕ ತನ್ನ ಕಾರನ್ನು ಪೊಲೀಸ್ ಠಾಣೆಯಿಂದ
ಬಿಡಿಸಿಕೊಳ್ಳಲು ಹೋದಾಗ ಹೆಡ್‌ ಕಾನ್ಸ್‌ಟೇಬಲ್ ತಸ್ಲಿಂ 50,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿದ್ದಾರೆ.


ಈ ಸಂಬಂಧ ಕಾರಿನ ಮಾಲಕರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಕದ್ರಿ ಠಾಣೆಯ ಇಬ್ಬರು‌ ಹೆಡ್‌ಕಾನ್ಸ್‌ಟೇಬಲ್‌ಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಲಂಚ ಸ್ವೀಕರಿಸುತ್ತಿದ್ದಾಗ ವಶಕ್ಕೆ ತೆಗೆದುಕೊಂಡಿದ್ದಾರೆ. ಬಂದಿತನನ್ನು  ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version