Connect with us

ಇತರ

*ದೆಹಲಿ ಪ್ರವಾಸ ಫಲಪ್ರದವಾಗಿದೆ ನಾನು ಪಕ್ಷದ ರಾಜ್ಯಾಧ್ಯಕ್ಷ…ಪಕ್ಷ ಹೇಳಿದಂತೆ ನಡೆದುಕೊಳ್ಳುತ್ತೇನೆ; ಡಿಸಿಎಂ ಡಿ.ಕೆ.ಶಿವಕುಮಾರ್

Published

on

ಬೆಂಗಳೂರು : ನೀರಾವರಿ ಯೋಜನೆಗಳ ವಿಚಾರವಾಗಿ ದೆಹಲಿ ಪ್ರವಾಸ ಬಹುತೇಕ ಫಲಪ್ರದವಾಗಿದ್ದು, ಎತ್ತಿನಹೊಳೆ ಯೋಜನೆ ಸಂಬಂಧ ನಮ್ಮ ಮನವಿಯನ್ನು ಪುರಸ್ಕರಿಸುವುದಾಗಿ ಹೇಳಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ದೆಹಲಿ ಪ್ರವಾಸದ ಬಗ್ಗೆ ಮಾಧ್ಯಮಗಳು ಕೇಳಿದಾಗ, “ದೆಹಲಿ ಪ್ರವಾಸದಲ್ಲಿ ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್ ಪಾಟೀಲ್ ಅವರನ್ನು ಭೇಟಿ ಮಾಡಿ ಕೃಷ್ಣಾ ನ್ಯಾಯಾಧಿಕರಣದ ತೀರ್ಪಿನ ಸಂಬಂಧ ಅಧಿಸೂಚನೆ ಹೊರಡಿಸುವುದು, ಮೆಕೆದಾಟು ಯೋಜನೆ ಅಪ್ರೈಸಲ್ ವರದಿ ಬಗ್ಗೆ ಚರ್ಚಿಸಲಾಗಿದೆ. ಅರಣ್ಯ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಕಳಸಾ ಬಂಡೂರಿ ವಿಚಾರವಾಗಿ ಚರ್ಚೆ ಮಾಡಲಾಗಿದೆ. ಈ ವಿಚಾರವಾಗಿ ಪ್ರಹ್ಲಾದ್ ಜೋಷಿ ಅವರ ಜತೆಗೂ ಮಾತನಾಡಿದ್ದೇನೆ ಎಂದರು. ಬೈಟ್
ಎರಡು ರಾಜ್ಯಗಳ ನಡುವೆ ರಾಜಿಗೆ ಸಲಹೆ ನೀಡಿದ್ದಾರೆ. ನಾವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಈ ವಿಚಾರದಲ್ಲಿ ಕೆಲವು ತಾಂತ್ರಿಕ ಅಂಶಗಳಿವೆ. ಗೋವಾದವರು ನಮಗೆ ಶೋಕಾಸ್ ನೋಟೀಸ್ ನೀಡಿರುವುದು ಸರಿಯಲ್ಲ ಎಂದು ಹೇಳಿದ್ದು, ಕಾನೂನು ತಜ್ಞರ ಜೊತೆ ಚರ್ಚೆ ಮಾಡಲಾಗಿದೆ” ಎಂದರು. ಜೊತೆಗೆ ಹೊಸ ಯೋಜನೆಗಳಿಗೆ ಮನವಿ ಸಲ್ಲಿಸಿದ್ದೇವೆ. ಸಂಸತ್ ಅಧಿವೇಶನ ಸಂದರ್ಭದಲ್ಲಿ ಮತ್ತೊಮ್ಮೆ ದೆಹಲಿಗೆ ಹೋಗಿ, ರಾಜ್ಯದ ಸಂಸದರ ಜೊತೆ ಚರ್ಚೆ ನಡೆಸಿ ಒಟ್ಟಾಗಿ ಒತ್ತಾಯ ಹೇರಲು ಮನವಿ ಮಾಡಲಾಗುವುದು” ಎಂದು ತಿಳಿಸಿದರು.

ಡಿ.ಕೆ. ಶಿವಕುಮಾರ್ ಅವರಿಗೆ ಕೆಲವು ಶಾಸಕರ ಬೆಂಬಲ ಮಾತ್ರವಿದೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ಪಕ್ಷದ ರಾಜ್ಯ ಅಧ್ಯಕ್ಷ. ಪಕ್ಷ ಏನು ಹೇಳುತ್ತದೆಯೋ ಅದನ್ನು ಮಾಡುತ್ತೇನೆ. ನಾನು ನಿನ್ನೆ ಬ್ಯುಸಿ ಇದ್ದೆ. ಅದರ ಮಧ್ಯೆ ಮುಖ್ಯಮಂತ್ರಿಗಳ ಹೇಳಿಕೆ ನೋಡಿದೆ. ನಿಮ್ಮ ಪ್ರಶ್ನೆಗಳಿಗೆ ಅವರೇ ಉತ್ತರ ನೀಡಿದ್ದಾರೆ. ಅವರು ಉತ್ತರ ನೀಡಿದ ಮೇಲೆ ನಾವು ಮತ್ತೆ ಆ ವಿಚಾರ ಚರ್ಚೆ ಮಾಡುವುದು ಸೂಕ್ತವಲ್ಲ. ನೀವುಗಳು ಸಹ ಮತ್ತೆ ಆ ವಿಚಾರವಾಗಿ ಪ್ರಶ್ನೆ ಮಾಡುವುದು ಸೂಕ್ತವಲ್ಲ” ಎಂದು ಹೇಳಿದರು.

ಈ ಹಿಂದೆ ನನ್ನ ಬಳಿ ಆಯ್ಕೆ ಇಲ್ಲ ಎಂದು ಹೇಳಿದ್ದಿರಿ, ಈಗಲೂ ನೀವು ಅದೇ ಸ್ಥಿತಿಯಲ್ಲಿದ್ದೀರಾ ಎಂದು ಕೇಳಿದಾಗ, “ನಿಮಗೆ ನಮ್ಮ ವಿಚಾರದಲ್ಲಿ ಯಾಕೆ ಗಾಬರಿ? ಈ ವಿಚಾರದಲ್ಲಿ ನಮಗೆ ಗಾಬರಿಯಿಲ್ಲ” ಎಂದರು. ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಬೇಕು ಎಂಬ ಆಸೆ ಅನೇಕರಿಗೆ ಇರುತ್ತದೆ ಎಂದು ಕೇಳಿದಾಗ, “ನಿಮ್ಮಲ್ಲೂ ಅನೇಕರಿಗೆ ಅನೇಕ ಆಸೆ ಇರುತ್ತವೆ. ನಾನು ಈ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಅದರ ಅವಶ್ಯಕತೆ ಇಲ್ಲ. ಯಾರು ಏನೇನು ಮಾತನಾಡಿದ್ದಾರೆ, ಅವರೇ ಪ್ರಶ್ನೆ ಉತ್ತರ ಎಲ್ಲವನ್ನು ನೀಡಿದ್ದಾರೆ. ಸಧ್ಯಕ್ಕೆ ನಾನು ಯಾವುದೇ ಉತ್ತರ ನೀಡುವುದಿಲ್ಲ” ಎಂದು ತಿಳಿಸಿದರು.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version