Published
11 months agoon
By
Akkare News
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿರುಸಿನ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಸರಕಾರಿ, ಅನುದಾನಿತ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಜು.17 ರಂದು ಜಿಲ್ಲಾಡಳಿತ ರಜೆ ಘೋಷಿಸಲಾಗಿದೆ.


ಮುನ್ನೆಚ್ಚರಿಕೆ ವಹಿಸಲು ಡಿಸಿ ಸೂಚನೆ
ನೀರು ಇರುವ ತಗ್ಗು ಪ್ರದೇಶ. ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು, ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು ಹಾಗೂ ವಿಪತ್ತು ನಿರ್ವಹಣೆಯನ್ನು ಕಡ್ಡಾಯವಾಗಿ ನಿರ್ವಹಿಸಬೇಕು. ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತತ್ಕ್ಷಣ ಸ್ಪಂದಿಸಬೇಕು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳಬಾರದು, ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ದ ಸ್ಥಿತಿಯಲ್ಲಿರಿಸಿಕೊಳ್ಳಬೇಕು ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ತಿಳಿಸಿದ್ದಾರೆ.









