Published
8 months agoon
By
Akkare News
ಮೈಸೂರು: ಎಚ್.ಡಿ ಕೋಟೆ ತಾಲೂಕಿನ ಬೀಚನಹಳ್ಳಿಯ ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರವಿವಾರ (ಜು.20) ಬಾಗಿನ ಅರ್ಪಿಸಿದರು.

ಚಾಮುಂಡಿ ಬೆಟ್ಟದ ಪ್ರಧಾನ ಅರ್ಚಕ ಶಶಿಶೇಖರ್ ದಿಕ್ಷೀತ್ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನ ನಡೆಸಲಾಯಿತು. ಏಳು ಬಾಗಿನ ಆರ್ಪಿಸಲಾಯಿತು.
ಇದರ ಜೊತೆಗೆ 32.25 ಕೋಟಿ ರೂ.ವೆಚ್ಚದ ಅಣೆಕಟ್ಟೆ ಪುನಶ್ಚೇತನ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಯಿತು.
ನಂತರ ಮಾತನಾಡಿದ ಸಿದ್ದರಾಮಯ್ಯ, ಜಲಾಶಯದ ಎದುರು ಬೃಂದಾವನ ಮಾದರಿಯಲ್ಲಿ ಅಭಿವೃದ್ಧಿ ಮಾಡಲಾಗುವುದು ಎಂದರು.


‘ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ. ಕೇಂದ್ರ ಸರ್ಕಾರ ಅನುಮತಿ ನೀಡಿದರೆ, ಸಮಾನಾಂತರ ಜಲಾಶಯ ನಿರ್ಮಿಸಲಾಗುವುದು. ಗೋವಾ ಹಾಗೂ ಕೇಂದ್ರದಲ್ಲಿ ಬಿಜೆಪಿಯವರದ್ದೇ ಸರ್ಕಾರವಿದೆ. ಮಹಾದಾಯಿ ಮತ್ತು ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ’ ಎಂದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ‘ಅಣೆಕಟ್ಟೆಯ ಪುನಶ್ಚೇತನಕ್ಕೆ 88 ಕೋಟಿ ರೂ. ಬಿಡುಗಡೆಗೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಕಬಿನಿ ನಮಗೆ ಜೀವನದಿಯಾಗಿದೆ. ಜಲಾಶಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಾಸಕರಾದ ಅನಿಲ್ ಚಿಕ್ಕಮಾದು, ಕೆ.ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ, ಎ.ಆರ್.ಕೃಷ್ಣಮೂರ್ತಿ ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಪಾಲ್ಗೊಂಡಿದ್ದರು.








