Published
8 months agoon
By
Akkare News
ಬೆಂಗಳೂರು ಮೂಲದ ಇಬ್ಬರು ಬಿಜೆಪಿ ಮುಖಂಡರಾದ ತಂದೆ-ಮಗನನ್ನು ಆಂಧ್ರಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ಗೆ ಹಾಜರಾಗಲು ತೆರಳಿದ್ದ ವೇಳೆ, ರಾಜಿ ಮಾಡಿಕೊಳ್ಳೋಣವೆಂದು ಕರೆದಾಗ ಈ ಘಟನೆ ನಡೆದಿದೆ.
ಬೆಂಗಳೂರು (ಜು.23): ಬೆಂಗಳೂರು ಮೂಲದ ಇಬ್ಬರು ಉದ್ಯಮಿಗಳು ಹಾಗೂ ಬಿಜೆಪಿ ಮುಖಂಡರನ್ನು ಆಂಧ್ರ ಪ್ರದೇಶ ರಾಜ್ಯದ ಬಾಪಟ್ಲ ಜಿಲ್ಲೆಯಲ್ಲಿ ಬರ್ಬರವಾಗಿ ಕತ್ತು ಸೀಳಿ ಕೊಲೆ ಮಾಡಿ, ಹೆದ್ದಾರಿ ಬಳಿಯಲ್ಲಿ ಬೀಸಾಡಲಾಗಿದೆ.
ವೀರಸ್ವಾಮಿ ರೆಡ್ಡಿ ಹಾಗೂ ಪ್ರಶಾಂತ ರೆಡ್ಡಿ ಇಬ್ಬರೂ ಇಬ್ಬರೂ ಬೆಂಗಳೂರಿನ ಕಾಡುಗುಡಿ ಮೂಲದ ಉದ್ಯಮಿಗಳು ಆಗಿದ್ದರು. ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಆಪ್ತ ಮೂಲಗಳಲ್ಲಿ ಇವರು ಗುರುತಿಸಿಕೊಂಡು, ಬಿಜೆಪಿಯಲ್ಲಿಯೂ ಗುರುತಿಸಿಕೊಂಡಿದ್ದರು. ಹೀಗಾಗಿ, ಕಳೆದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿಯೂ ಬಿಜೆಪಿ ಪರವಾಗಿ ಕೆಲಸ ಮಾಡಿದ್ದರು. ಆದರೆ, ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂದಿಸಿದ ಕೋರ್ಟ್ ಕೇಸ್ ವಿಚಾರಣೆಗೆ ಆಂಧ್ರ ಪ್ರದೇಶ ರಾಜ್ಯಕ್ಕೆ ತೆರಳಿದ್ದರು. ಈ ವೇಳೆ ಇಬ್ಬರನ್ನೂ ಅಪಹರಣ ಮಾಡಿ ಕೊಲೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.