Published
8 months agoon
By
Akkare News
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪುತ್ತೂರು ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆಯಾಗಿದೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಮುಂಜಾಗ್ರತಾ ಕ್ರಮವಾಗಿ ಪುತ್ತೂರು ತಾಲೂಕಿನಾದ್ಯಂತ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.24ಕ್ಕೆ ರಜೆ ಘೋಷಣೆ ಮಾಡಿ ತಹಸೀಲ್ದಾರ್ ಆದೇಶ ಹೊರಡಿಸಿದ್ದಾರೆ.