Published
1 year agoon
By
Akkare News
ಪುತ್ತೂರು: ಕೋಡಿಂಬಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ಅಗ್ನಿಶಾಮಕ ದಳದ ವತಿಯಿಂದ ಬೆಂಕಿ ಅವಘಢದ ಬಗ್ಗೆ ಮುನ್ನೆಚ್ಚರಿಕೆ ಮತ್ತು ಜಾಗರೂಕತೆಯ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷ್ಯತೆ ಜು.26ರಂದು ನಡೆಯಿತು.
ಠಾಣಧಿಕಾರಿ ಶಂಕರ್ ಅಗ್ನಿ ಅವಘಡ ಉಂಟಾದಾಗ ಮಾಡಬೇಕಾದ ಪ್ರಥಮ ಚಿಕಿತ್ಸೆ, ಕೈಗೊಳ್ಳಬೇಕಾದ ಜಾಗರೂಕತೆಯ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು. ನಂತರ ಅವಘಡ ಉಂಟಾದಾಗ ಅಗ್ನಿ ನಂದಿಸುವ ಪ್ರಾತ್ಯಕ್ಷತೆ ಮಾಡಿ ತೋರಿಸಿದರು.