Published
7 months agoon
By
Akkare News
ಟ್ಯೂಷನ್‌ಗೆ ತೆರಳಿದ್ದ ವಿದ್ಯಾರ್ಥಿಯ ಅಪಹರಿಸಿದ್ದ ದುಷ್ಕರ್ಮಿಗಳು ; ಬಳಿಕ ಪೋಷಕರಿಗೆ ಕರೆ ಮಾಡಿ 5 ಲಕ್ಷ ರೂ. ನೀಡಲು ಬೇಡಿಕೆ
ಪೋಷಕರು ಒಪ್ಪಿಕೊಂಡಿದ್ದರೂ ವಿದ್ಯಾರ್ಥಿಯ ಕತ್ತು ಕೊಯ್ಧು ಹತ್ಯೆ ; ಶವ ಸುಟ್ಟ ದುಷ್ಕರ್ಮಿಗಳು ; ಬನ್ನೇರುಘಟ್ಟ ಅರಣ್ಯದಲ್ಲಿ ಘಟನೆ
ಬೆಂಗಳೂರು: ಬಾಲಕನೊಬ್ಬನನ್ನು ಕಿಡ್ನಾéಪ್ ಮಾಡಿ ಬರ್ಬರವಾಗಿ ಕೊಲೆಗೈದು ಮೃತದೇಹವನ್ನು ಪೆಟ್ರೋಲ್‌ನಿಂದ ಸುಟ್ಟಿರುವ ಭೀಭತ್ಸ ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿ ಯಲ್ಲಿ ನಡೆದಿದೆ.
ವಿದ್ಯಾರ್ಥಿ ನಿಶ್ಚಿತ್(12) ಹತ್ಯೆಯಾದ ದುರ್ದೈವಿ. ಬಾಲಕನ ಪೋಷಕರು ನೀಡಿದ ದೂರು ಆಧರಿಸಿ ಅಪಹರಣ ಮತ್ತು ಕೊಲೆ ಪ್ರಕ ರಣ ದಾಖಲಿಸಿಕೊಂಡು ಹಂತಕರಿಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಗರದ ಅರಕೆರೆಯ ಶಾಂತಿನಿಕೇತನ ಲೇಔಟ್‌ನಲ್ಲಿ ನಿಶ್ಚಿತ್ ಪೋಷಕರು ವಾಸವಾಗಿದ್ದರು. ಬಾಲಕನ ತಂದೆ ನಗರದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಸಹಾಯಕ ಪ್ರಾಧ್ಯಾಪಕ ಆಗಿದ್ದಾರೆ. ಬುಧವಾರ ಸಂಜೆ ಟ್ಯೂಷನ್ ಮುಗಿಸಿ ಅರಕೆರೆ ಬಳಿ ಸೈಕಲ್‌ನಲ್ಲಿ ನಿಶ್ಚಿತ್ ಮನೆಗೆ ಬರುತ್ತಿದ್ದಾಗ ಬೈಕ್‌ನಲ್ಲಿ ಬಂದು ಬಾಲಕನನ್ನ ಅಪಹರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಮಧ್ಯೆ ಬನ್ನೇರುಘಟ್ಟ ಅರಣ್ಯ ಪ್ರದೇಶದಲ್ಲಿ ಬಾಲಕನನ್ನ ಹತ್ಯೆ ಮಾಡಿ ಶವ ಬಿಸಾಕಿ ಆರೋಪಿಗಳು ಪರಾರಿಯಾಗಿದ್ದಾರೆ. ಬಾಲಕನ ಕತ್ತು ಕುಯ್ದು, ಮುಖ ಚಹರೆ ಗೊತ್ತಾಗದಿರಲು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.
ಘಟನಾ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಡಿಸಿಪಿ ನಾರಾಯಣ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
2025ರ ಜುಲೈ 8ರಂದು ವಿಚಾರಣಾ ನ್ಯಾಯಾಲಯ ಹೊರಡಿಸಿರುವ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ವಜಾಗೊಳಿಸಲಾಗಿದೆ. ಮಧ್ಯಂತರ ಅರ್ಜಿಯನ್ನು ಹೊಸದಾಗಿ ಪರಿಗಣಿಸಲು ಪ್ರಕರಣವನ್ನು ಸಕ್ಷಮ ನ್ಯಾಯಾಲಯಕ್ಕೆ ವಾಪಸ್ ಕಳುಹಿಸಲಾಗುತ್ತಿದೆ. ವಿಚಾರಣಾ ನ್ಯಾಯಾಲಯವು ಈ ಆದೇಶದಲ್ಲಿ ಮಾಡಿರುವ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ಸಕ್ಷಮ ನ್ಯಾಯಾಲಯ ಮಧ್ಯಂತರ ಅರ್ಜಿಯನ್ನು ತುರ್ತಾಗಿ ನಿರ್ಧರಿಸಬೇಕು. ಸಿವಿಲ್ ದಾವೆ, ಕ್ರಿಮಿನಲ್ ಪ್ರಕ್ರಿಯೆ, ಆರೋಪ, ಪ್ರತ್ಯಾರೋಪದ ಮೇಲೆ ಈ ನ್ಯಾಯಾಲಯವು ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ. ಆದೇಶದಲ್ಲಿ ಪರಿಗಣಿಸಿರುವ ಒಂದು ಅಂಶವನ್ನು ಹೊರತುಪಡಿಸಿ ಪಕ್ಷಕಾರರ ನಡುವೆ ಎಲ್ಲ ವಾದಗಳನ್ನು ಮುಕ್ತವಾಗಿರಿಸಲಾಗಿದೆ ಎಂದು ನ್ಯಾಯಾಲಯ ಆದೇಶಿಸಿದೆ.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಕೆ, ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಎಸ್ ಜೆ, ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.