Connect with us

ಇತರ

ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ : ಚಿಕ್ಕಹಟ್ಟಿಹೊಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆ

Published

on

ಆಂಕರ್ -ಖಾನಾಪೂರ ತಾಲೂಕಿನ ಚಿಕ್ಕಹಟ್ಟಿಹೊಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಸಾಮಾನ್ಯ ಮತಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರು ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದರು ಸೋಮವಾರ ಈ ಆಯ್ಕೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಪಿಕೆಪಿಎಸ್ ಚುನಾವಣೆಯ ಫಲಿತಾಂಶದಿಂದ ನನ್ನ ಹೆಗಲಿಗೆ ಮತ್ತೋಂದು ಮಹತ್ವದ ಜವಾಬ್ದಾರಿ ಬಿದ್ದಿದ್ದು,ಕಾಯಾ,ವಾಚಾ,ಮನಸಾದಿಂದ ಸಹಕಾರ ಸಂಘದ ಮೂಲಕ ಮತ್ತಷ್ಟು ಜನರ ಸೇವೆಯಲ್ಲಿ ತೊಡಗಿಕೊಳ್ಳುವ ಸಂಕಲ್ಪ ಮಾಡುತ್ತೇನೆ ಎಂದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಮುಖಂಡರು ಮತ್ತು ಹಿತೈಷಿಗಳಿಂದ, ವಿವಿಧ ಸಂಘ ಸಂಘಟನೆಗಳ ವತಿಯಿಂದ ಅವರನ್ನು ಆತ್ಮೀಯವಾಗಿ ಅಭಿನಂದಿಸಿ ಸತ್ಕರಿಸಲಾಯಿತು.

 

 

Continue Reading
Click to comment

Leave a Reply

Your email address will not be published. Required fields are marked *

Advertisement