Published
7 months agoon
By
Akkare News
ಮಂಗಳೂರು: ಬೈಟ್‌ಗಾಗಿ ಒತ್ತಡ ಮತ್ತು ಸುಳ್ಳು ಸುದ್ದಿ ಹರಡಿದ ಆರೋಪದಲ್ಲಿ ಸುವರ್ಣ ನ್ಯೂಸ್ ನ ಸಂಪಾದಕ ಅಜಿತ್ ಹನುಮಕ್ಕನರ್, ವರದಿಗಾರ ಮತ್ತು ಕ್ಯಾಮರಾ ಮೆನ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.
ಅವರು ಬೈಟ್ ನೀಡಲು ನಿರಾಕರಿಸಿದಾಗ, ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ, ತಳ್ಳಾಟ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಘಟನೆ ನಡೆದ ಕೆಲವೇ ಸಮಯದಲ್ಲಿ, ಸುವರ್ಣ ನ್ಯೂಸ್ ಸುದ್ದಿ ವಾಹಿನಿಯಲ್ಲಿ ಆ್ಯಂಕರ್ ಅಜಿತ್ ಹನುಮಕ್ಕನವರ್, “ಸುವರ್ಣ ನ್ಯೂಸ್ ವರದಿಗಾರರ ಮೇಲೆ ಮಹೇಶ್ ಶೆಟ್ಟಿ ತಿಮರೋಡಿಯಿಂದ ಹಲ್ಲೆ” ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ದೂರಿನ ಮೇರೆಗೆ ಬೆಳ್ತಂಗಡಿ ಠಾಣೆಯಲ್ಲಿ ಅಕ್ರ: 76/2025 ಕಲಂ: 126(2), 296, 351 ಜೊತೆಗೆ 3(5) ಬಿಎನ್‌ಎಸ್ -2023 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.