Published
7 months agoon
By
Akkare News
ಬೆಂಗಳೂರಿನ ವಿಧಾನಸೌಧದ ಸಭಾಂಗಣದ ಕೊಠಡಿಯಲ್ಲಿ ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರ ಅಧ್ಯಕ್ಷತೆಯಲ್ಲಿ ಗಣಿ ಇಲಾಖೆ (ಕೆಂಪು ಕಲ್ಲು ವಿಚಾರಕ್ಕೆ ಸಂಬಂಧಿಸಿದಂತೆ) ಸಮಸ್ಯೆಗಳ ಬಗ್ಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಸಚಿವರು, ಶಾಸಕರು ಹಾಗೂ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಪಾಲ್ಗೊಂಡಿದ್ದರು.


ಸಭೆಯಲ್ಲಿ ಸಚಿವರಾದ ಕೃಷ್ಣ ಬೈರೇಗೌಡ, ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳಕರ್, ಪ್ರಿಯಾಂಕ್ ಖರ್ಗೆ, ಎಸ್.ಎಸ್. ಮಲ್ಲಿಕಾರ್ಜುನ್, ಮಂಕಾಳ್ ವೈದ್ಯ, ಹಿರಿಯರ ಶಾಸಕರಾದ ಆರ್.ವಿ.ದೇಶಪಾಂಡೆ, ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜ, ಮಂಜುನಾಥ್ ಭಂಡಾರಿ ಸೇರಿದಂತೆ ಮೂರು ಜಿಲ್ಲೆಗಳ ಶಾಸಕರು, ವಿಧಾನ ಪರಿಷತ್ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.














