Connect with us

ಹವಾಮಾನ

ರಾಜ್ಯಾದ್ಯಂತ ಇಂದಿನಿಂದ ಭಾರಿ ಮಳೆ ಮುನ್ಸೂಚನೆ, ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

Published

on

ರಾಜ್ಯದಲ್ಲಿ ವರುಣನ ಅಬ್ಬರ ಮತ್ತೆ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ಅಲರ್ಟ್​ ಘೋಷಣೆ ಮಾಡಿದೆ.

ಬೆಂಗಳೂರು : ರಾಜ್ಯಾದ್ಯಂತ ಇಂದಿನಿಂದ ಮಳೆ ಮತ್ತಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವ ಹೆಚ್ಚಾಗಿದೆ. ಹಾಗಾಗಿ, ದೇಶದ ಬಹುತೇಕ ಕಡೆಗಳಲ್ಲಿ ವರ್ಷಧಾರೆ ಮುಂದುವರೆದಿದ್ದು, ಕರ್ನಾಟಕದಲ್ಲೂ ವರುಣನ ಆರ್ಭಟ ಜೋರಾಗಿದೆ.

ಮಳೆ ಅಲರ್ಟ್​ ಘೋಷಣೆ : ರಾಜ್ಯದ ಕರಾವಳಿ ಭಾಗದಲ್ಲಿ ಆಗಸ್ಟ್​ 19ರ ನಂತರ ಮಳೆ ಮತ್ತಷ್ಟು ಹೆಚ್ಚಾಗಲಿರುವ ಕಾರಣ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

ಹೆಚ್ಚಿನ ಮಳೆ ಮುನ್ಸೂಚನೆ : ಉಳಿದಂತೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ತುಮಕೂರು, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಗದಗ ಜಿಲ್ಲೆಯಲ್ಲಿಯೂ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version