Connect with us

ಇತ್ತೀಚಿನ ಸುದ್ದಿಗಳು

ಉಪರಾಷ್ಟ್ರಪತಿ ಚುನಾವಣೆಗೆ ಸಿಪಿ ರಾಧಾಕೃಷ್ಣನ್​​ ಎನ್​ಡಿಎ ಅಭ್ಯರ್ಥಿ

Published

on

ಭಾರತೀಯ ಜನತಾ ಪಕ್ಷ (ಬಿಜೆಪಿ)ವು ಮುಂಬರುವ ಉಪರಾಷ್ಟ್ರಪತಿ ಚುನಾವಣೆಗೆ ಸಿ.ಪಿ. ರಾಧಾಕೃಷ್ಣನ್ ಅವರನ್ನು ಎನ್‌ಡಿಎ ಅಭ್ಯರ್ಥಿಯಾಗಿ ಅಧಿಕೃತವಾಗಿ ಘೋಷಿಸಿದೆ. ಪ್ರಸ್ತುತ ಮಹಾರಾಷ್ಟ್ರ ರಾಜ್ಯಪಾಲರಾಗಿರುವ ರಾಧಾಕೃಷ್ಣನ್ ಅವರನ್ನು ಸೆಪ್ಟೆಂಬರ್ 9 ರಂದು ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸಲು ಆಯ್ಕೆ ಮಾಡಲಾಗಿದೆ. ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಂಸದೀಯ ಮಂಡಳಿ ಸಭೆಯಲ್ಲಿ ರಾಧಾಕೃಷ್ಣನ್​ ಅವರ ಹೆಸರನ್ನು ಅಂತಿಮಗೊಳಿಸಲಾಯಿತು.

ನವದೆಹಲಿ, ಆಗಸ್ಟ್​ 17: ಮುಂಬರುವ ಉಪರಾಷ್ಟ್ರಪತಿ ಚುನಾವಣೆಗೆ  ಸಿಪಿ ರಾಧಾಕೃಷ್ಣನ್​​  ಅವರನ್ನು ಎನ್​ಡಿಎ ಅಭ್ಯರ್ಥಿಯಾಗಿ ಬಿಜೆಪಿ  ಅಧಿಕೃತವಾಗಿ ಘೋಷಿಸಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮುಂಬರುವ ಉಪರಾಷ್ಟ್ರಪತಿ ಚುನಾವಣೆಗೆ ಎನ್​ಡಿಎ ಮೈತ್ರಿಕೂಟವು ತನ್ನ ಅಭ್ಯರ್ಥಿಯನ್ನಾಗಿ ಪ್ರಸ್ತುತ ಮಹಾರಾಷ್ಟ್ರದ ರಾಜ್ಯಪಾಲರಾಗಿರುವ ಸಿ.ಪಿ.ರಾಧಾಕೃಷ್ಣನ್ ಅವರನ್ನು ಆಯ್ಕೆ ಮಾಡಿದೆ ಎಂದು ಹೇಳಿದರು. ರವಿವಾರ (ಆ.17) ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಂಸದೀಯ ಮಂಡಳಿ ಸಭೆಯಲ್ಲಿ ರಾಧಾಕೃಷ್ಣನ್​ ಅವರ ಹೆಸರನ್ನು ಅಂತಿಮಗೊಳಿಸಲಾಯಿತು.

ಈ ಹಿಂದೆ ಉಪರಾಷ್ಟ್ರಪತಿಯಾಗಿದ್ದ ಜಗದೀಪ್​ ಧನ್ಕರ್​ ಅವರು ಜುಲೈ 21 ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಜಗದೀಪ್​ ಧನ್ಕರ್​ ಅವರು ಅನಾರೋಗ್ಯದ ಕಾರಣ ಹೇಳಿ, ಜುಲೈ 21 ರಂದು ಪದತ್ಯಾಗ ಮಾಡಿದ್ದಾರೆ. ಇದೇ ಸೆಪ್ಟೆಂಬರ್​ 9 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ.

2 ಬಾರಿ ಲೋಕಸಭಾ ಸದಸ್ಯರಾಗಿದ್ದ ಸಿ.ಪಿ.ರಾಧಾಕೃಷ್ಣನ್

ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ (ಸಿ.ಪಿ.ರಾಧಾಕೃಷ್ಣನ್) ಅವರು ತಮಿಳುನಾಡಿನ ತಿರುಪ್ಪೂರಿನಲ್ಲಿ ಅಕ್ಟೋಬರ್​ 20, 1957 ರಂದು ಜನಿಸಿದರು. ಸಿಪಿ ರಾಧಾಕೃಷ್ಣನ್ ಅವರು 16ನೇ ವಯಸ್ಸಿನಿಂದಲೇ ಆರ್‌ಎಸ್‌ಎಸ್ ಮತ್ತು ಜನಸಂಘದಂತಹ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿದ್ದಾರೆ. ಸಿಪಿ ರಾಧಾಕೃಷ್ಣನ್​ ಅವರು ಕೊಯಮತ್ತೂರಿನಿಂದ ಎರಡು ಬಾರಿ ಲೋಕಸಭಾ ಸದಸ್ಯರಾಗಿದ್ದರು.

‘1998 ಮತ್ತು 1999 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಅವರು ಬಿಜೆಪಿಯಿಂದ ಕಣಕ್ಕೆ ಇಳಿದರು. 1998 ರ ಚುನಾವಣೆಯಲ್ಲಿ 150,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಮತ್ತು 1999 ರ ಚುನಾವಣೆಯಲ್ಲಿ 55,000 ಮತಗಳ ಅಂತರದಿಂದ ಗೆದ್ದರು.  ಸಿಪಿ ರಾಧಾಕೃಷ್ಣನ್​ ಅವರು 2024ರಿಂದ ಮಹಾರಾಷ್ಟ್ರದ 24ನೇ ರಾಜ್ಯಪಾಲರಾಗಿದ್ದಾರೆ. 2003 ರಿಂದ 2006ರವರೆಗೆ ತಮಿಳುನಾಡಿನ ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷರೂ ಆಗಿದ್ದರು.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version