Published
6 months agoon
By
Akkare News
ಬೆಂಗಳೂರು: ವಿಧಾನಸಭೆ ಅಧಿವೇಶನದ ವೇಳೆ ‘ನಮಸ್ತೆ ಸದಾ ವತ್ಸಲೇ ಮಾತೃಭೂಮಿ… ಆರ್ಎಸ್ಎಸ್ ಗೀತೆ ಹಾಡಿ ಕಾಂಗ್ರೆಸ್ ನಲ್ಲಿ ದೊಡ್ಡ ಚರ್ಚೆ ಹುಟ್ಟುಹಾಕಿದ್ದ ಡಿಸಿಎಂ ಡಿಕೆ ಶಿವಕುಮಾರ್ ಇದೀಗ ಕ್ಷಮೆಯಾಚನೆ ಮಾಡಿದ್ದಾರೆ.


ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಹುಟ್ಟಿದ್ದೇ ಕಾಂಗ್ರೆಸ್ಸಿಗನಾಗಿ. ನಾನು ಸಾಯುವುದೂ ಕೂಡ ಕಾಂಗ್ರೆಸ್ಸಿಗನಾಗಿಯೇ. ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು’ ಎಂದು ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಅಲ್ಲದೆ ನಾನು ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಕೇಳಿರುವ ಪ್ರಶ್ನೆಗೆ ಉತ್ತರಿಸರುವ ಸಂದರ್ಭದಲ್ಲಿ ಆರ್ಎಸ್ಎಸ್ ಸಿದ್ದಂತಾದ ಅರಿವಿದೆ ಎಂಬುದನ್ನು ತಿಳಿಸಲು ಗೀತೆ ಹಾಡುವ ಮೂಲಕ ಕಳೆದಿದ್ದೆ ಅಷ್ಟೇ ಬದಲಾಗಿ ಬೇರೇನೂ ಅಲ್ಲ ಎಂದು ಸ್ಪಷ್ಟಪಡಿಸಿದರು.
ಡಿಕೆ ಶಿವಕುಮಾರ್ ಅವರ ಕ್ರಮಕ್ಕೆ ವಿರೋಧ ಪಕ್ಷದ ನಾಯಕರು ಮಾತ್ರವಲ್ಲದೆ ಸ್ವ ಪಕ್ಷದ ನಾಯಕರಾದ ಬಿ.ಕೆ. ಹರಿಪ್ರಸಾದ್ ಕೂಡ ವಿರೋಧ ವ್ಯಕ್ತಪಡಿಸಿದ್ದರು ಹಾಗಾಗಿ ನಾನು ಯಾವುದೇ ತಪ್ಪು ಮಾಡಿಲ್ಲ. ಒಂದು ವೇಳೆ ತಪ್ಪು ಮಾಡಿದ್ದೇನೆ ಎಂದು ನೀವು ಭಾವಿಸಿದ್ದರೆ ಕ್ಷಮೆ ಇರಲಿ ಎಂದು ಹೇಳಿದ್ದಾರೆ.


ಯಾರ ಪಾಠವೂ ಅಗತ್ಯವಿಲ್ಲ:
ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಇದುವರೆಗೂ ವಿಧಾನಸಭೆಯಲ್ಲಿ ಆಚಾರ ವಿಚಾರಗಳನ್ನು ಪಾಲನೆ ಮಾಡಿಕೊಂಡು ಬಂದಿದ್ದೇನೆ. ವಿದ್ಯಾರ್ಥಿ ಸಂಘಟನೆಯಲ್ಲಿಂದಲೇ ಗುರುತಿಸಿಕೊಂಡು ಬಂದವನು. ನಾನೇನು ಹೊಸದಾಗಿ ಕಾಂಗ್ರೆಸ್ ಸೇರಿದವನಲ್ಲ, ನನಗೆ ಯಾರ ಪಾಠವೂ ಅಗತ್ಯವಿಲ್ಲ. ನನಗೂ ಗಾಂಧಿ ಕುಟುಂಬಕ್ಕೂ ಭಕ್ತ ಮತ್ತು ಭಗವಂತನ ನಡುವಿರುವ ಸಂಬಂಧ. ನಾನು ಎಂಎ ಪೊಲೀಟಿಕಲ್ ವಿದ್ಯಾರ್ಥಿ. ರಾಜಕಾರಣಕ್ಕೆ ಬರೋದಕ್ಕಿಂತಲೂ ಮುನ್ನ ಎಲ್ಲಾ ಪಕ್ಷಗಳ ಅಧ್ಯಯನ ಮಾಡಿದ್ದೇನೆ. ಕಮ್ಯೂನಿಸಂ, ಬಿಜೆಪಿ, ಆರ್ಎಸ್ಎಸ್, ಸೇರಿದಂತೆ ಎಲ್ಲ ಪಕ್ಷಗಳ ಬಗ್ಗೆ ತಿಳಿದುಕೊಂಡಿದ್ದೇನೆ. ಅಷ್ಟು ಮಾತ್ರವಲ್ಲದೆ ಮುಸ್ಲಿಂ ಲೀಗ್ ಸಮಾವೇಶದಲ್ಲೂ ಭಾಗಿಯಾಗಿದ್ದೆ. ಅವರ ಶಿಸ್ತಿಗೆ ಬೆರೆಗಾಗಿದ್ದೆ ಎಂದು ಡಿಕೆ ಶಿವಕುಮಾರ್ ಹೇಳಿದರು.

‘







