Connect with us

ಸ್ಥಳೀಯ

ಕರ್ನಾಟಕ Rains: ನಾಳೆಯಿಂದ ಕರ್ನಾಟಕದಾದ್ಯಂತ ಮತ್ತೆ ಮಳೆ ಜೋರು, ಸೆ.1ರವರೆಗೂ ಮಳೆ

Published

on

ಆಗಸ್ಟ್​ 26: ಕರ್ನಾಟಕದಾದ್ಯಂತ ಆಗಸ್ಟ್ 27ರಿಂದ ಮತ್ತೆ ಮಳೆ(Rain) ಜೋರಾಗಲಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.
ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡದಲ್ಲಿ ಮಳೆಯಾಗಲಿದೆ.

ಕ್ಯಾಸಲ್​​ರಾಕ್, ಕದ್ರಾದಲ್ಲಿ ಮಳೆಯಾಗಿದೆ. ಉಳಿದೆಡೆ ಒಣಹವೆ ಇತ್ತು. ಎಚ್​​ಎಎಲ್​​ನಲ್ಲಿ 29.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​​ನಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 29.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 29.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕೇವಲ ಕರ್ನಾಟಕ ಮಾತ್ರವಲ್ಲದೆ, ಆಂಧ್ರಪ್ರದೇಶ, ಮಣಿಪುರ, ಮಿಜೋರಾಂ, ಕಾರೈಕಲ್, ಪುದುಚೇರಿ, ರಾಜಸ್ಥಾನ, ಕೇರಳ, ಮಹಾರಾಷ್ಟ್ರದಲ್ಲಿ ಕೂಡ ಮಳೆಯಾಗಲಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version