Published
6 months agoon
By
Akkare News
ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ ಇದರ ನೇತೃತ್ವದಲ್ಲಿ ಆ. 29ರವರೆಗೆ ಕೋಡಿಂಬಾಡಿಯ ಅಶ್ವತ್ಥಕಟ್ಟೆ ವಠಾರದಲ್ಲಿ ನಡೆಯಲಿರುವ 42ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಆ.27ರಂದು ಬೆಳಿಗ್ಗೆ ಚಾಲನೆ ದೊರೆತಿದೆ.
ಆ.27ರಂದು ಬೆಳಿಗ್ಗೆ ಶ್ರೀ ಮಹಾಗಣಪತಿ ಪ್ರತಿಷ್ಠಾ ಪೂಜೆ ನಡೆದ ನಂತರ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿರಂಜನ್ ರೈ ಮಠಂತಬೆಟ್ಟು ಧ್ವಜಾರೋಹಣ ನೆರವೇರಿಸಿದರು.
ಬಳಿಕ ಗಣಹೋಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ ವಿನಾಯಕನಗರ ಯುವಶಕ್ತಿ ಗೆಳೆಯರ ಬಳಗದಿಂದ ಮತ್ತು ಮಠಂತಬೆಟ್ಟು ಶ್ರೀ ಚಿನ್ಮಯೀ ಮಹಿಳಾ ಭಜನಾ ಮಂಡಳಿಯವರಿಂದ ಭಜನಾ ಸೇವೆ, ಕೋಡಿಂಬಾಡಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ.
ರಾತ್ರಿ ನಡೆಯುವ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಕೋಡಿಂಬಾಡಿ ಗ್ರಾ.ಪಂ. ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ, ವಿವೇಕಾನಂದ ಬಿ.ಎಡ್.ಕಾಲೇಜಿನ ಪ್ರಾಂಶುಪಾಲೆ ಡಾ. ಶೋಭಿತಾ ಸತೀಶ್, ಕೋಡಿಂಬಾಡಿ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಮಾಂಡೋವಿ ಮೋಟಾರ್ಸ್ ಸುಳ್ಯ ಶಾಖೆಯ ಮ್ಯಾನೇಜರ್ ಚಂದ್ರಶೇಖರ ಸನಿಲ್ ಮತ್ತು ಕೋಡಿಂಬಾಡಿ ಹಿ.ಪ್ರಾ.ಶಾಲೆಯ ಎಸ್.ಡಿ.ಎಂ.ಸಿ.ಅಧ್ಯಕ್ಷ ಶೇಖರ ಪೂಜಾರಿ ನಿಡ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಭೆಯ ಬಳಿಕ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ 9 ರಿಂದ ಶ್ರೀ ಶಾರದಾ ಕಲಾಕೇಂದ್ರ ಪುತ್ತೂರು ಇದರ ವಿದ್ಯಾರ್ಥಿಗಳಿಂದ ನೃತ್ಯಾಭಿವಂದನೆ ಹಾಗೂ ಉಷಾ ಪರಿಣಯ ನೃತ್ಯರೂಪಕ ನಡೆಯಲಿದೆ. ಈ ದಿನ ಸ್ವಯಂಸೇವಕರಾಗಿ ಕೋಡಿಂಬಾಡಿಯ ವನಿತಾ ಸಮಾಜ ಮತ್ತು ವಿನಾಯಕನಗರ ಯುವಶಕ್ತಿ ಗೆಳೆಯರ ಬಳಗದವರು ಸಹಕರಿಸಲಿದ್ದಾರೆ.
ಆ.28ರಂದು ಬೆಳಿಗ್ಗೆ ವೇದಮೂರ್ತಿ ಶ್ರೀವತ್ಸ ಕೆದಿಲಾಯ ನೇತೃತ್ವದಲ್ಲಿ 108 ತೆಂಗಿನಕಾಯಿ ಗಣಯಾಗ, ಗಣಯಾಗದ ಪೂರ್ಣಾಹುತಿ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ನವೀನ್ ಬೆಳ್ಳಿಪ್ಪಾಡಿ ಮತ್ತು ತಂಡದವರಿಂದ ಸಂಗೀತ ಸ್ವರಸಂಗಮ, ಸಂಜೆ 4.15ರಿಂದ ಕೋಡಿಂಬಾಡಿ ಅಶ್ವತ್ಥಕಟ್ಟೆ ಧರ್ಮ ಶ್ರೀ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ, ಸಂಜೆ 6ರಿಂದ ಪುಷ್ಪರಾಜ್ ನೆಲ್ಯಾಡಿ ಮತ್ತು ಬಳಗದಿಂದ ಮಾಯಾ ಮ್ಯಾಜಿಕ್ ನಡೆಯಲಿದೆ.
ರಾತ್ರಿ ನಡೆಯುವ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಅಶೋಕ ಪೂಜಾರಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಭಟ್ರಪ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ರಾಧಾಕೃಷ್ಣ ಭಟ್, ಉಪ್ಪಿನಂಗಡಿ ಶ್ರೀರಾಮ ಶಾಲೆಯ ಸಂಚಾಲಕ ಯು.ಜಿ ರಾಧ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಶಿಧರ್ ಎಂ ಮತ್ತು ನಿವೃತ್ತ ಮುಖ್ಯ ಶಿಕ್ಷಕಿ ಯಶೋದಾ ಎನ್.ಎಂ. ಭಾಗವಹಿಸಲಿದ್ದಾರೆ. ಈ ದಿನ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೋಡಿಂಬಾಡಿ ಒಕ್ಕೂಟ ಮತ್ತು ಕೋಡಿಂಬಾಡಿಯ ಅಶ್ವತ್ಥಕಟ್ಟೆಯ ಧರ್ಮಶ್ರೀ ಕಲಾವೃಂದದವರು ಸ್ವಯಂಸೇವಕರಾಗಿ ಭಾಗವಹಿಸಲಿದ್ದಾರೆ.