Published
6 months agoon
By
Akkare News
ಮಂಗಳೂರು ಅಗಸ್ಟ್ 28: ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ . ನಿನ್ನೆಯಿಂದ ಪ್ರಾರಂಭವಾದ ಮಳೆ ಇಂದು ಕೂಡ ಮುಂದುವರೆದಿದೆ.
ರಾಜ್ಯದ ಕರಾವಳಿ ಭಾಗದಲ್ಲಿ ಸೆಪ್ಟೆಂಬರ್ 2ರ ವರೆಗೆ ಭಾರಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಗಳೂರು, ಪುತ್ತೂರು, ಮೂಲ್ಕಿ, ಮೂಡುಬಿದಿರೆ, ಉಳ್ಳಾಲ, ಬಂಟ್ವಾಳ ತಾಲ್ಲೂಕು ಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಗುರುವಾರ ಅಗಸ್ಟ್ 28 ರಂದು ರಜೆ ಘೋಷಿಸಲಾಗಿದೆ. ಬುಧವಾರ ಬಿಟ್ಟು ಬಿಟ್ಟು ಸುರಿದ ಮಳೆ ಗುರುವಾರದ ಬೆಳಿಗ್ಗೆಯ ಹೊತ್ತಿಗೆ ತೀವ್ರತೆ ಪಡೆದುಕೊಂಡಿದೆ
ಉಡುಪಿ ಜಿಲ್ಲೆಯಲ್ಲೂ ಮಳೆ ಅಬ್ಬರ ಮುಂದುವರೆದಿದ್ದು, ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಹಾಗೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಆ.28ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಆದೇಶ ಹೊರಡಿಸಿದ್ದಾರೆ.