Published
6 months agoon
By
Akkare News
ರಾಷ್ಟ್ರೀಯ ಹೆದ್ದಾರಿಯ ತಲಪಾಡಿ ಟೋಲ್ ಗೇಟ್ ಬಳಿ ಬಸ್ ಮತ್ತು ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿ ಮಗು ಸೇರಿದಂತೆ ಐವರು ಮೃತಪಟ್ಟ ಘಟನೆ ಗುರುವಾರ ಮಧ್ಯಾಹ್ನ ವರದಿಯಾಗಿದೆ.
ಕೆಸಿ ರೋಡ್‌ನಿಂದ ಬರುತ್ತಿದ್ದ ರಿಕ್ಷಾ ಮತ್ತು ಬಸ್ ಮಧ್ಯೆ ಅಪಘಾತ ನಡೆದಿದ್ದು, ರಿಕ್ಷಾದಲ್ಲಿದ್ದ ಕೆಸಿ ರೋಡ್ ಮೂಲದವರೆನ್ನಲಾದ ಐವರು ಮೃತಪಟ್ಟಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು ಮಗು ಸೇರಿದೆ ಎನ್ನಲಾಗುತ್ತಿದೆ. ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದಾರೆ.
ಕಾಸರಗೋಡು ಜಿಲ್ಲೆಯ ಮಂಜೇಶ್ವರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.