Connect with us

ಇತರ

ಪುತ್ತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ, ಲೋಕಾಯುಕ್ತ ದಾಳಿ ಬಂಧನ. ಶೀಘ್ರದಲ್ಲಿ ಇನ್ನೂ ಕೆಲವರಿಗೆ ಬಲೆ..!!?

Published

on

ಪುತ್ತೂರು:  ಸಾರ್ವಜನಿಕರೊಬ್ಬರಿಂದ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣದ ಸಮೇತ ಆರೋಪಿಯನ್ನು ಬಂಧಿಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯಲ್ಲಿ ಗುರುವಾರ ಸಂಜೆ ನಡೆದಿದೆ.

ಪುತ್ತೂರು ತಾಲೂಕಿನ ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯ ಎಫ್.ಡಿ.ಎ ಸುನೀಲ್ ಎಂಬಾತ ದೂರುದಾರರಿಂದ 12,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಗಳೂರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸುನೀಲ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ದೂರುದಾರನ ಚಿಕ್ಕಪ್ಪಗೆ ಸೇರಿದ 65 ಸೆಂಟ್ಸ್ ಜಮೀನು ಅಕ್ರಮ ಸಕ್ರಮದನ್ವಯ ಮಂಜೂರಾಗಿದ್ದು, ನಂತರ ಅವರು ವೀಲುನಾಮೆ ಮೂಲಕ ದೂರುದಾರನಿಗೆ ಹಕ್ಕು ಬರೆಸಿಕೊಟ್ಟಿದ್ದರು. ಜಾಗವನ್ನು ಪರಭಾರೆ ಮಾಡಲು ತಹಶೀಲ್ದಾರ್ ನಿರಾಕ್ಷೇಪಣಾ ಪತ್ರ ಅವಶ್ಯಕವಾಗಿದ್ದರಿಂದ, 2024ರ ಡಿಸೆಂಬರ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

 

Continue Reading
Click to comment

Leave a Reply

Your email address will not be published. Required fields are marked *

Advertisement