Connect with us

ಇತರ

ಮಂಡ್ಯ : ಗಣೇಶನ ವಿಸರ್ಜನೆಯ ಸಂಭ್ರಮ… ಯುವಕ ನೀರಿನಲ್ಲಿ ಮುಳುಗಿ ಸಾವು

Published

on

ಮಂಡ್ಯ: ಗಣಪತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬೇಲೂರು ಗ್ರಾಮದ ಕೆರೆಯಲ್ಲಿ ಸಂಭವಿಸಿದೆ.

ಯರಹಳ್ಳಿ ಗ್ರಾಮದ ಪ್ರದೀಪ್( 28) ಮೃತ ಯುವಕನಾಗಿದ್ದು, ಬುಧವಾರ ರಾತ್ರಿ ಬೇಲೂರು ಕೆರೆಯಲ್ಲಿ ಗಣೇಶ ವಿಸರ್ಜನೆ ಮಾಡುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಯುವಕರ ಜೊತೆ ನೀರಿಗಿಳಿದಿದ್ದ ಪ್ರದೀಪ್‌ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಅಗ್ನಿಶಾಮಕ ಸಿಬ್ಬಂದಿಗಳು ಮೃತ ದೇಹವನ್ನು ಹೊರ ತೆಗೆದಿದ್ದಾರೆ.

ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲುಗೊಂಡಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement