Connect with us

ರಾಜಕೀಯ

ಬಿಜೆಪಿಯಿಂದ ರಾಜಕೀಯ ಯಾತ್ರೆ, ಇದರಿಂದ ಅವರಿಗೆ ರಾಜಕೀಯ ಲಾಭ ಸಿಗಲ್ಲ‌: ಸಿಎಂ ಸಿದ್ದರಾಮಯ್ಯ

Published

on

ಮೈಸೂರು: ಧರ್ಮಸ್ಥಳದಲ್ಲಿ ಇಂದು ಬಿಜೆಪಿ ನಡೆಸುತ್ತಿರುವ ಧರ್ಮ ರಕ್ಷಣಾ ಯಾತ್ರೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರಿನ ಸಿದ್ದರಾಮನ ಹುಂಡಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ರಾಜಕೀಯವಾಗಿ ಯಾತ್ರೆ ಮಾಡುತ್ತಿದೆ. ಮಾಡಲಿ ಬಿಡಿ. ಅವರಿಗೆ ಇದರಿಂದ ಯಾವ ರಾಜಕೀಯ ಲಾಭನೂ ಸಿಗಲ್ಲ ಎಂದ ಅವರು ಎಸ್ ಐ ಟಿ ಆದಾಗ ಯಾಕೆ ಬಿಜೆಪಿ ಅವರು ಯಾತ್ರೆ ಮಾಡಲಿಲ್ಲ‌. ಇದು ಡೋಂಗಿ ತನ ಅಲ್ವಾ? ಎಂದು ಕಿಡಿಕಾರಿದರು.

ಇನ್ನು ಬಿಜೆಪಿಯಿಂದ ಚಾಮುಂಡಿ ಚಲೋ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು ಹಿಂದುತ್ವ ಗಟ್ಟಿ ಆಗುತ್ತೆ ಎಂದು ಬಿಜೆಪಿ ಈ ಯಾತ್ರೆಗಳ ಪ್ಲಾನ್ ಮಾಡುತ್ತಿದೆ. ಇವರಿಂದ ಹಿಂದುತ್ವ ಗಟ್ಟಿಯಾಗಲ್ಲ. ನಾನು ಕೂಡ ಹಿಂದೂನೇ. ನಾವೆಲ್ಲರೂ ಕೂಡ ಹಿಂದೂ ನಾನು ನಮ್ಮ ಊರಲ್ಲಿ ರಾಮ ಮಂದಿರ ಕಟ್ಟಿಸಿದ್ದೇನೆ ಎಂದು ಹೇಳಿದರು.

ಹಿಂದೂಗಳು ಎಂದರೆ ಸುಳ್ಳು ಹೇಳುವುದು, ಅಪಪ್ರಚಾರ ಮಾಡುವುದಲ್ಲ. ಮನುಷ್ಯತ್ವ ಇರುವವರು ಹಿಂದೂಗಳು. ಅಮಾನವೀಯ ನಡವಳಿಕೆ ತೋರುವವರು ಹಿಂದೂಗಳಲ್ಲ.

ಬಿಜೆಪಿ ಅವರು ದಸರಾದಲ್ಲೂ ರಾಜಕೀಯ ಮಾಡ್ತಿದ್ದಾರೆ. ಅವರ ಮನೆಯನ್ನೂ ರಾಜಕೀಯಕ್ಕೆ ಬೇಕಾದರೆ ಬಳಸಿ ಕೊಳ್ಳುತ್ತಾರೆ. ಸುಳ್ಳು ಹೇಳುವುದು ಬಿಟ್ಟು ಬಿಜೆಪಿ ಗೆ ಏನೂ ಗೊತ್ತು?ಬಿಜೆಪಿ ಹೋರಾಟದಿಂದ ದಸರಾ ಮೇಲೆ ಕೆಟ್ಟ ಪರಿಣಾಮ ಬೀರಲ್ಲ. ಹಿಂದೂಗಳೆಲ್ಲಾ ಬಿಜೆಪಿ ಜೊತೆ ಇಲ್ಲ ಎಂದು ಹೇಳಿದರು.

ಇನ್ನು ಚಾಮುಂಡಿ ಬೆಟ್ಟ ಹಿಂದೂಗಳದಲ್ಲ ಎಂಬ ಡಿಕೆ ಶಿವಕುಮಾರ್ ಹೇಳಿಕೆಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಸಿಎಂ, ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿನೇ ಇರಬಹುದು, ಈಗ ವಿಚಾರ ಇರುವುದು ದಸರಾ. ಚಾಮುಂಡಿ ಬೆಟ್ಟದ್ದು ಅಲ್ಲ. ದಸರಾ ನಾಡಹಬ್ಬ. ನಾಡಹಬ್ಬ ಎಲ್ಲರಿಗೂ ಸೇರಿದ್ದು. ಡಿಕೆ ಹೇಳಿದ್ದು ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version