Published
6 months agoon
By
Akkare News
ಸೌಜನ್ಯ ತಾಯಿ ಹೇಳಿದ ನೈಜ ಸಂಗತಿ ಜಗತ್ತಿಗೆ ತಿಳಿಸುವ ಧೈರ್ಯವಿದೆಯೇ ಎಂದು ‘ಧರ್ಮಸ್ಥಳ ಚಲೋ’ ಮಾಡಿದ ರಾಜ್ಯ ಬಿಜೆಪಿ ನಾಯಕರಿಗೆ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.
ಧರ್ಮಸ್ಥಳದಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಕುಮಾರಿ ಸೌಜನ್ಯ ಮನೆಗೆ ಭೇಟಿ ನೀಡಿದ್ದ ಬಿಜೆಪಿ ನಾಯಕರಿಗೆ ಸವಾಲು ಹಾಕಿರುವ ಸಚಿವರು, “ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ, ಷಡ್ಯಂತ್ರ ನಡೆಯುತ್ತಿದೆ ಎಂದು ಧರ್ಮಸ್ಥಳ ಚಲೋ ಮಾಡಿದ ಬಿಜೆಪಿ ನಾಯಕರು ಸೌಜನ್ಯ ತಾಯಿ ಕುಸುಮಾವತಿಯವರು ತಮ್ಮೆದುರು ಹೇಳಿದ ನೈಜ ಸಂಗತಿಯನ್ನು ಜಗತ್ತಿಗೆ ತಿಳಿಸು ಧೈರ್ಯವಿದೆಯೇ” ಎಂದು ಎಕ್ಸ್‌ನಲ್ಲಿ ಪ್ರಶ್ನಿಸಿದ್ದಾರೆ.
ಸೌಜನ್ಯ ಹೆಸರು ಹೇಳಿಕೊಂಡು ಹಣ ಮಾಡಿದ್ದಾರೆ, ಇಷ್ಟು ದೊಡ್ಡ ಮನೆ ಕಟ್ಟಿಸಿದ್ದಾರೆ ಎಂದು ನಿಮ್ಮದೇ ಪಕ್ಷದವರು ಹೇಳುತ್ತಿದ್ದಾರೆ ಎಂಬ ಕುಸುಮಾವತಿಯವರ ಮಾತಿಗೆ ರಾಜ್ಯ ಬಿಜೆಪಿ ನಾಯಕರು ಉತ್ತರ ನೀಡದೆ ಮೌನವಹಿಸಿದ್ದೇಕೆ? ಬಿವೈ ವಿಜಯೇಂದ್ರ ಅವರೇ, ಮೊದಲು ಸೌಜನ್ಯ ಕುಟುಂಬಕ್ಕೆ ನಿಮ್ಮ ಪಕ್ಷ ನೀಡಿದ ಕಿರುಕುಳಕ್ಕೆ ನ್ಯಾಯ ಸಿಗಬೇಕಲ್ಲವೇ? ಆ ನೊಂದ ಕುಟುಂಬಕ್ಕೆ ಬಿಜೆಪಿ ನೀಡುತ್ತಿರುವ ಕಿರುಕುಳದ ಬಗ್ಗೆ ಉತ್ತರ ಸಿಗಲೇಬೇಕು” ಎಂದು ಆಗ್ರಹಿಸಿದ್ದಾರೆ.
“ಬಿಜೆಪಿ ಯಾರ ಪರವಾಗಿ ಧರ್ಮಸ್ಥಳಕ್ಕೆ ಹೋಗಿದ್ದರೋ ಅವರ ವಿರುದ್ಧವೇ ಕುಸುಮಾವತಿ ದೂರು ಹೇಳಿದ್ದಾರೆ.
ಬಿಜೆಪಿ ನಾಯಕರು ಕುಸುಮಾವತಿಯವರ ಮಾತು ಕೇಳಿಸಿಕೊಂಡ ನಂತರವೂ ಕಾರ್ಯಕ್ರಮದ ವೇದಿಕೆ ಹತ್ತಿ ಕೂರುವುದಕ್ಕೆ ಹೇಗೆ ಮನಸಾಯಿತು? ಬಿಜೆಪಿಯವರು ಸೌಜನ್ಯ ಪರವೋ, ವಿರುದ್ಧವೋ ಎನ್ನುವುದನ್ನು ಸ್ಪಷ್ಟಪಡಿಸುವ ಅಗತ್ಯವಿದೆ” ಎಂದು ಅವರು ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ.