Published
6 months agoon
By
Akkare News
ನಾಲ್ಕು ಸ್ಲ್ಯಾಬ್ ಬದಲಿಗೆ 5%, 18% ಸ್ಲ್ಯಾಬ್ ಗೆ ಸರ್ವಾನುಮತ ದೊರೆತಿದೆ. ಎರಡರ ಜೊತೆಗೆ ಐಷರಾಮಿ ವಸ್ತುಗಳಿಗೆ 40% ಜಿಎಸ್‌ಟಿಯ ಸ್ಲ್ಯಾಬ್ ಅನ್ವಯವಾಗಲಿದೆ.
ದೆಹಲಿಯಲ್ಲಿ ಎರಡು ದಿನಗಳ ಕಾಲ ಜಿಎಸ್‌ಟಿ ಕೌನ್ಸಿಲ್ ಸಭೆ ನಡೆಯುತ್ತಿದೆ. ಮೊದಲ ದಿನದ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, “ಸಾಮಾನ್ಯ ಜನರನ್ನು ಗಮನದಲ್ಲಿಟ್ಟುಕೊಂಡು ಜಿಎಸ್‌ಟಿ ಸ್ಲ್ಯಾಬ್ ಬದಲಾವಣೆ ಮಾಡಲಾಗಿದೆ. ದಿನ ಬಳಕೆ ವಸ್ತುಗಳು, ಆರೋಗ್ಯ ವಲಯ ಸೇರಿ ಹಲವು ವಲಯಗಳಿಗೆ ಅನುಕೂಲವಾಗಲಿದೆ. ಸಾಕಷ್ಟು ಚರ್ಚೆ ಬಳಿಕ ನಿರ್ಧಾರಕ್ಕೆ ಬರಲಾಗಿದ್ದು ಎಲ್ಲರೂ ಒಮ್ಮತದಿಂದ ಬೆಂಬಲವನ್ನು ನೀಡಿದ್ದಾರೆ. ಇದಕ್ಕಾಗಿ ನಾನು ಜಿಎಸ್‌ಟಿ ಕೌನ್ಸಿಲ್ ನ ಎಲ್ಲ ಸದಸ್ಯರಿಗೂ ಅಭಾರಿಯಾಗಿದ್ದಾನೆ” ಎಂದು ಹೇಳಿದರು.
ಸಂಸ್ಕರಿಸಿದ ಜಂಕ್ ಫುಡ್ಗಳು: ಹೆಚ್ಚಿನ ಸಕ್ಕರೆ, ಉಪ್ಪು ಅಥವಾ ಕೊಬ್ಬಿನ ಅಂಶವಿರುವ ಫಾಸ್ಟ್ ಫುಡ್ ಮತ್ತು ಪ್ಯಾಕ್ ಮಾಡಿದ ತಿಂಡಿಗಳಂತಹ ವಸ್ತುಗಳು ಸಹ 40% ಏರಿಕೆಯಾಗಲಿದೆ.