Published
8 months agoon
By
Akkare News
ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು (IT) ಕಳೆದ ಆಗಸ್ಟ್ ತಿಂಗಳ 13 ಹಾಗೂ 14 ರಂದು ನಡೆಸಿದ ಶೋಧ ಕಾರ್ಯ ನಡೆಸಿ ಅಕ್ರಮ ಹಣ, ಚಿನ್ನವನ್ನು ಪತ್ತೆಹಚ್ಚಿದ್ದರು. ಇದೀಗ ಈ ಪ್ರಕರಣ ಸಂಬಂಧಿಸಿ ಸತೀಶ್ ಸೈಲ್ ಅರೆಸ್ಟ್ ಆಗಿದ್ದಾರೆ.
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು (IT) ಕಳೆದ ಆಗಸ್ಟ್ ತಿಂಗಳ 13 ಹಾಗೂ 14 ರಂದು ಶೋಧ ಕಾರ್ಯ ನಡೆಸಿದ್ದರು. ಈ ವೇಳೆ ಇಡಿ ಅಧಿಕಾರಿಗಳು ಕೋಟ್ಯಾಂತರ ರೂಪಾಯಿ ಹಣ, ಕೆಜಿಗಟ್ಟಲೆ ಚಿನ್ನ ಪತ್ತೆಹಚ್ಚಿದ್ದಾರೆ. ಮಾತ್ರವಲ್ಲ ಬ್ಯಾಂಕ್ ಖಾತೆಯಲ್ಲಿದ್ದ ಕೋಟ್ಯಾಂತರ ರೂಪಾಯಿ ಹಣವನ್ನು ಕೂಡ ಫ್ರೀಜ್ ಮಾಡಿದ್ದರು. ಇದೀಗ ಈ ಪ್ರಕರಣ ಸಂಬಂಧಿಸಿ ಕಾರವಾರ ಶಾಸಕ ಸತೀಶ್ ಸೈಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಶಾಸಕ ಸತೀಶ್ ಕೃಷ್ಣ ಸೈಲ್ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಆಗಸ್ಟ್ 13 ಮತ್ತು 14ರಂದು ದಾಳಿ ನಡೆಸಿದ್ದು, ಈ ವೇಳೆ ಕೋಟ್ಯಂತರ ರೂಪಾಯಿ ನಗದು, ಕಿಲೋಗಟ್ಟಲೆ ಚಿನ್ನ ಮತ್ತು ಬ್ಯಾಂಕ್ ಖಾತೆಗಳಲ್ಲಿ ದೊಡ್ಡ ಮೊತ್ತವನ್ನು ವಶಪಡಿಸಿಕೊಂಡಿದೆ. ಕಾರವಾರ, ಗೋವಾ, ಮುಂಬೈ ಮತ್ತು ನವದೆಹಲಿಯ ಸುಮಾರು 15 ಸ್ಥಳಗಳಲ್ಲಿ ಏಕಕಾಲಕ್ಕೆ ನಡೆದ ಈ ದಾಳಿಯು ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.