Published
6 months agoon
By
Akkare News
ವಿಧಾನ ಸೌಧದಲ್ಲಿ ನಿನ್ನೆ ಸಿಎಂ ಸಿದ್ದರಾಮಯ್ಯ ಪ್ರಮುಖವಾಗಿ ಅನುದಾನ ಹಂಚಿಕೆ ವಿಚಾರವಾಗಿ ಬೆಂಗಳೂರು ಭಾಗದ ಶಾಸಕರೊಂದಿಗೆ ಚರ್ಚೆ ಮಾಡಿದರು. ಈ ವೇಳೆ ಶಾಸಕರ ಕುಂದು ಕೊರತೆಯನ್ನ ಆಲಿಸಿದರು. ಈಗಾಗಲೇ ಮೂರು ಹಂತದಲ್ಲಿ ಸಭೆ ಮಾಡಿದ್ದು, ಶಾಸಕರು, ಪರಿಷತ್ ಸದಸ್ಯರ ಜೊತೆಗೂ ಸಿಎಂ ಮೀಟಿಂಗ್ ಮಾಡಿದರು.
ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಸಚಿವರು ಹಾಗೂ ಶಾಸಕರ ಜೊತೆ ಸುದೀರ್ಘ ಸಭೆ ನಡೆಸಿ, ಗ್ಯಾರಂಟಿ ಯೋಜನೆ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿಯ ಮಾಹಿತಿ ಪಡೆದು, ಕ್ಷೇತ್ರದಲ್ಲಿ ಆಗಬೇಕಿರುವ ಕೆಲಸ ಕಾರ್ಯಗಳ ಬೇಡಿಕೆಯನ್ನು ಆಲಿಸಿ, ಅಗತ್ಯ ಸಹಕಾರ ಹಾಗೂ ಅನುದಾನ ಒದಗಿಸುವುದಾಗಿ ತಿಳಿಸಿದ್ದರು.
ಸಿಎಂ ಅವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳಿಗೆ 50 ಕೋಟಿ ರೂ. ಹಂಚಿಕೆ ಮಾಡಲಾಗಿದೆ. ಹಣ ಬಿಡುಗಡೆ ಮಾಡಲು ಕಾಮಗಾರಿ ವಿವರ ನೀಡುವಂತೆ ಎಲ್ಲಾ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಪತ್ರ ಬರೆದಿದ್ದರು.