Published
6 months agoon
By
Akkare News


ಶುಕ್ರವಾರದಿಂದ ಭಾರೀ ಮಳೆ ವಿಸ್ತರಣೆ
ಸೆಪ್ಟಂಬರ್ 12ರಿಂದ ಭಾರೀ ಮಳೆಯು ರಾಜ್ಯದ ಇತರ ಜಿಲ್ಲೆಗಳಿಗೂ ವಿಸ್ತರಣೆ ಆಗಲಿದೆ. ಆಗ ಮೇಲಿನ ಜಿಲ್ಲೆಗಳ ಜೊತೆಗೆ ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲೂ ಧಾರಾಕಾರ ಮಳೆ ಆಗಲಿದ್ದು, ಬೇರೆ ಬೇರೆ ದಿನಗಳಲ್ಲಿ ಯೆಲ್ಲೋ ಅಲರ್ಟ್ ಕೊಡಲಾಗಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ ಮಾಹಿತಿ ನೀಡಿದೆ.
ನೆನ್ನೆ ಬೆಳಗಾವಿ, ವಿಜಯಪುರ ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಮಳೆ ಆಗಿದೆ. ಕರಾವಳಿ ಹಾಗೂ ಮಲೆನಾಡಿಗೆ ತಾತ್ಕಾಲಿಕವಾಗಿ ವಿರಾಮ ನೀಡಿರುವ ಮಳೆರಾಯ ಒಳನಾಡು ಪ್ರದೇಶಗಳಲ್ಲಿ ಅಬ್ಬರಿಸಲು ಸಜ್ಜಾಗಿದ್ದಾನೆ. ಬೆಂಗಳೂರು, ಕಲಬುರಗಿ, ಧಾರವಾಡ, ಚಿತ್ರದುರ್ಗದಲ್ಲಿ ಒಣಹವೆ ಮುಂದುವರಿದಿದೆ.

ರಾಜ್ಯದ ಗರಿಷ್ಠ ತಾಪಮಾನದ ಜಿಲ್ಲೆಗಳು
ಕಲಬುರಗಿಯಲ್ಲಿ 34.1 ಡಿಗ್ರಿ ಸೆಲ್ಸಿಯಸ್, ರಾಯಚೂರು 33.4 ಡಿಗ್ರಿ ಸೆಲ್ಸಿಯಸ್, ಕೊಪ್ಪಳ (ಗಂಗಾವತಿ) 33.1 ಡಿಗ್ರಿ ಸೆಲ್ಸಿಯಸ್, ಗದಗ 32.4 ಡಿಗ್ರಿ ಸೆಲ್ಸಿಯಸ್, ಧಾರವಾಡ 31 ಡಿಗ್ರಿ ಸೆಲ್ಸಿಯಸ್, ಕಾರವಾರ 31.8 ಡಿಗ್ರಿ ಸೆಲ್ಸಿಯಸ್, ಚಾಮರಾಜನಗರ 32.5 ಡಿಗ್ರಿ ಸೆಲ್ಸಿಯಸ್, ಚಿತ್ರದುರ್ಗ 32.7 ಡಿಗ್ರಿ ಸೆಲ್ಸಿಯಸ್, ಮಂಡ್ಯ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.


ಹಾಸನ, ದಾವಣಗೆರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ವಿಜಯಪುರ, ಬೆಂಗಳೂರು ವಿಮಾನ ನಿಲ್ದಾಣ, ಬೆಳಗಾವಿ ವಿಮಾನ ನಿಲ್ದಾಣಗಳಲ್ಲ ತಲಾ 30 ಡಿಗ್ರಿ ಸೆಲ್ಸಿಯಸ್ ತಾಪಮಾನ ಕಂಡು ಬಂದಿದೆ. ರಾಜ್ಯಾದ್ಯಂತ ಬಿಸಲಿನ ಅಬ್ಬರ ಹೆಚ್ಚಾಗಿದೆ. ಇದಕ್ಕೆ ಈ ವಾರಾಂತ್ಯಕ್ಕೆ ಮಳೆ ತಂಪೆರೆಯುವ ಸಾಧ್ಯತೆ ಇದೆ.









